Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ – ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ – ಪ್ರಕರಣ ದಾಖಲು

    October 16, 2024
    Share

    ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಒಬ್ಬರು ತಲೆಗೆ ಗಂಭೀರವಾಗಿ ಯಾರೋ ಹೊಡೆದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು. ರಾಜೇಶ್ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ ತೊಳೆಯುವುದು, ಕೆಲವೊಮ್ಮೆ ಕಂಡೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್‌ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹ ಕಿವಿಯಲ್ಲಿ ರಕ್ತ ಒಸರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಸಹೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.