Facebook Twitter Instagram
    Tuesday, September 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ
    ಇತ್ತೀಚಿನ ಸುದ್ದಿ

    ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ

    September 29, 2026
    Share

    ಮಂಗಳೂರು: 2015ರಲ್ಲಿ ಮಂಗಳೂರು ಸಬ್ ಜೈಲಿನಲ್ಲಿ ನಡೆದ ಮಾಡೂರು ಯುಸುಫ್ ಹತ್ಯೆ ಪ್ರಕರಣದ ತೀರ್ಪು ಸೆ.28ರಂದು ಪ್ರಕಟಗೊಂಡಿದ್ದು, ಪ್ರಕರಣದ 10 ಆರೋಪಿಗಳ ಪೈಕಿ ಐವರು ಆರೋಪಿಗಳು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಸಬ್ ಜೈಲಿನಲ್ಲಿ 2015ರ ನ.2ರಂದು ಮಾಡೂರು ಯುಸುಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಐಪಿಸಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿತ್ತು.

    ಪ್ರಕರಣದ ತನಿಖೆ ನಡೆಸಿದ ಅಂದಿನ ಎಸಿಪಿ ತಿಲಕ್ ಚಂದ್ರ ಅವರು 2016ರ ಜ.28ರಂದು ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣವು SC No.151/2021ರಂತೆ ವಿಚಾರಣೆ ನಡೆದಿದ್ದು, ಸೆ.28ರಂದು ತೀರ್ಪು ಪ್ರಕಟವಾಗಿದೆ. ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ವಿರುದ್ಧ ಆರೋಪ ಸಾಬೀತಾಗಿದ್ದು, ನ್ಯಾಯಾಲಯವು ಐವರನ್ನೂ ದೋಷಿಗಳೆಂದು ತೀರ್ಪು ನೀಡಿದೆ.ಇನ್ನು ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ ಹಾಗೂ ಸತೀಶ್ ಪೂಜಾರಿ ಅವರನ್ನು ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ.

    ಈ ಪೈಕಿ ಸತೀಶ್ ಪೂಜಾರಿ ಮೃತಪಟ್ಟಿದ್ದಾರೆ.ದೋಷಿಗಳಾದ ಐವರಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋಹನ್ ಅವರು ವಾದ ಮಂಡಿಸಿದ್ದರು

    Post Views: 10

    Related Posts

    ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ!!

    September 29, 2026

    ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನೋಟೀಸ್ ಕುರಿತು ಕಲ್ಲಡ್ಕ ಪ್ರಭಾಕರ ಭಟ್ ಪ್ರತಿಕ್ರಿಯೆ

    September 28, 2026

    ಸಮವಸ್ತ್ರ ಬಿಚ್ಚಿ ನಿಲ್ಲಿಸ್ತೀನಿ: ಉಲ್ಲಾಳ ಠಾಣೆ ಇನ್‌ಸ್ಪೆಕ್ಟರ್‌ಗೆ ಕೋರ್ಟ್‌ ಎಚ್ಚರಿಕೆ

    September 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ!!

    September 29, 2026

    ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ

    September 29, 2026

    ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನೋಟೀಸ್ ಕುರಿತು ಕಲ್ಲಡ್ಕ ಪ್ರಭಾಕರ ಭಟ್ ಪ್ರತಿಕ್ರಿಯೆ

    September 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.