Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕನ ಶವ ಪತ್ತೆ..! ಕೊಲೆ ಶಂಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಶವ ಪತ್ತೆ..! ಕೊಲೆ ಶಂಕೆ

    April 28, 2025
    Share

    ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ.

    ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡ ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

    ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

    ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

    Post Views: 143

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.