Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ- ಕೊಲೆ ಶಂಕೆ..!

    March 31, 2024
    Share

    ಬಂಟ್ವಾಳ: ವಂಚನೆ ಆರೋಪ ಎದುರಿಸುತ್ತಿದ್ದ ಯುವಕನೋರ್ವನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನದ್ದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಎಂದು ಗುರುತಿಸಲಾಗಿದೆ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ಮೃತ ಯುವಕ ಪದ್ಮನಾಭ ಸಾಮಂತ ವಿಚಾರಣೆಗೆ ಹಾಜರಾಗುವುದಾಗಿ ಪೋಲೀಸರಿಗೆ ತಿಳಿಸಿದ್ದ. ಆದರೆ ಯುವಕ ಕಳೆದ ಮೂರು ದಿನಗಳಿಂದ ಠಾಣೆಗೆ ಹಾಜರಾಗಿರಲಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿತ್ತು. ಯಾರ ಸಂಪರ್ಕಕ್ಕೂ ಸಿಗದೆ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಇದೀಗ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮನೆಯ ಪಕ್ಕದ ಗುಡ್ಡವೊಂದರಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೋಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಪೋಲಿಸ್ ಪ್ರಾಥಮಿಕ ಮಾಹಿತಿ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಆದರೆ ನಿಜಾಂಶವೇನು ಎನ್ನುವುದು ಮರಣೋತ್ತರ ಪರೀಕ್ಷೆಯ ಬಳಿಕ ತಿಳಿದುಬರಬೇಕಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪದ್ಮನಾಭ ಸಾಮಂತ ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.