Facebook Twitter Instagram
    Thursday, July 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ

    July 16, 2026
    Share

    ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ.

    ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

    ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ.

    ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

    ಘಟನೆಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು, ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದು, ಘಟನೆಯ ನಿಖರ ಕಾರಣ ಮತ್ತು ಹಿನ್ನೆಲೆಯ ಕುರಿತು ತನಿಖೆ ಮುಂದುವರಿದಿದೆ.

    Post Views: 1

    Related Posts

    ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ

    July 16, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

    July 16, 2026

    ಬೆಳ್ತಂಗಡಿ: ಯುವಕನ ಸಾವು ಪ್ರಕರಣ- ಆರೋಪಿಯ ಬಂಧನ

    July 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ

    July 16, 2026

    ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ

    July 16, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

    July 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.