ಚಿತ್ರದುರ್ಗ;ಮುರುಘಾ ಮಠದಲ್ಲಿ ಹಾಸ್ಟೆಲ್‌ನಲ್ಲಿ ತಂಗಿದ್ದ ನನ್ನ ಮಗಳು ಆರು ತಿಂಗಳಿಂದ ಕಾಣಿಸುತ್ತಿಲ್ಲ ಎಂದು ಅಂಧ ವ್ಯಕ್ತಿಯೋರ್ವರು ಹೇಳಿದ್ದಾರೆ.
ಶುಕ್ರವಾರ ಮಠದ ಆವರಣಲ್ಲಿ ಕಾಣಿಸಿಕೊಂಡ ವ್ಯಕ್ತಿ, ಪೊಲೀಸರು ಹಾಗೂ ಮಠದ ಆಡಳಿತ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಪುತ್ರಿ ಸಾಕ್ಷಿ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅವರನ್ನು ಹಲವು ತಿಂಗಳಿಂದ ನೋಡಲು ಸಾಧ್ಯವಾಗಿಲ್ಲ. ಈಗ ಅವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆಯಂತೆ. ಎಲ್ಲ ಹಾಸ್ಟೆಲ್ ಪರಿಶೀಲಿಸಿದರೂ ಮಗಳು ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳ ಎದುರು ದೂರಿದ್ದಾರೆ. ಇದಲ್ಲದೆ ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು.
ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಮ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು.ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.