Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ-ವಿದ್ಯಾರ್ಥಿನಿಯರಿಂದ ದೂರು
    ಇತ್ತೀಚಿನ ಸುದ್ದಿ

    ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ-ವಿದ್ಯಾರ್ಥಿನಿಯರಿಂದ ದೂರು

    August 27, 2022
    Share

    ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರಕ್ಕೆ ದೂರು ನೀಡಿದ್ದಾರೆ.

    ಮಠದ ಉಚಿತ ಹಾಸ್ಟೆಲ್ ನಲ್ಲಿ ಇರುವ ಪ್ರೌಢಶಾಲೆಯ ಕೆಲವು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮಠದ ಪ್ರೌಢಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರು ಉಚಿತ ಹಾಸ್ಟೆಲ್ ನಲ್ಲಿ ವಾಸವಾಗಿದ್ದು, ಸರದಿಯಂತೆ ಸ್ವಾಮೀಜಿ ಬಳಿಗೆ ವಿದ್ಯಾರ್ಥಿನಿಯರು ಹೋಗಬೇಕು. ಒಪ್ಪದಿದ್ದಾಗ ಹಾಸ್ಟೆಲ್ ವಾರ್ಡನ್, ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡುತ್ತಾರೆ ಎನ್ನಲಾಗಿದೆ.

    ಹಣ್ಣು ಮತ್ತು ಸಿಹಿ ಕೊಟ್ಟು ಆಶೀರ್ವಾದ ಮಾಡುವ ನೆಪದಲ್ಲಿ ಏಕಾಂತಕ್ಕೆ ಕರೆಸಿಕೊಳ್ಳುವ ಸ್ವಾಮೀಜಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ. ಕುಟುಂಬದವರ ಮಾಹಿತಿ ಪಡೆದುಕೊಂಡು ಕಷ್ಟದಲ್ಲಿರುವ ಪೋಷಕರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ ಎಂದು ಹೇಳಲಾಗಿದೆ.

    ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಬಲವಂತದ ಲೈಂಗಿಕ ಕ್ರಿಯೆ ನಂತರ ಸ್ವಾಮೀಜಿ ಸ್ವಚ್ಛತೆಗೆ ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರು ಬಾತ್ರೂಮ್ ಬಳಸುವಂತೆ ಹೇಳುತ್ತಿದ್ದರು. ಕಿರುಕುಳ ಪ್ರಶ್ನಿಸಿದ್ದಕ್ಕೆ ಕೆಲವು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ನಿಂದ ಹೊರಗೆ ಹಾಕಿದ್ದಾರೆ. ಈ ಕುರಿತಾಗಿ ಒಡನಾಡಿ ಸಂಸ್ಥೆಯಿಂದ ಪೊಲೀಸ್ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

    Post Views: 250

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.