Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಪೆರುವಾಯಿ ಗ್ರಾಪಂ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ.!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಪೆರುವಾಯಿ ಗ್ರಾಪಂ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ.!

    September 7, 2025
    Share

    ಬಂಟ್ವಾಳ: ಲಂಚ ಸ್ವೀಕರಿಸುವ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶನಿವಾರ (ಸೆ.6) ನಡೆದಿದೆ.

    ಪೆರುವಾಯಿ ಗ್ರಾಮಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಪೆರುವಾಯಿ ಗ್ರಾಮಕ್ಕೆ ಸಂಬಂಧ ಪಟ್ಟ ದೂರುದಾರರು ತಮ್ಮ ಜಾಗಕ್ಕೆ ಕೊಳವೆಬಾವಿ ಮಂಜೂರಾತಿಗಾಗಿ 2024ರಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಳಿಕ ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. ದೂರುದಾರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು, ಅವರಿಗೆ ಅಸೌಖ್ಯ ಇದ್ದುದರಿಂದ ಫಿರ್ಯಾದಿದಾರರನ್ನು ಕರೆದು ಕೊಳವೆ ಬಾವಿ ಬಗ್ಗೆ ಪಂಚಾಯತ್ ಗೆ ಹೋಗಿ ವಿಚಾರಿಸಿಕೊಂಡು ತಿಳಿಸಿದ್ದಾರೆ. ಈ ಹಿನ್ನಲೆ ಸೆ. 2 ರಂದು ಪೆರುವಾಯಿ ಗ್ರಾಮ ಪಂಚಾಯತ್ ಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾದ ನಫೀಸಾ ರವರಲ್ಲಿ ತನ್ನ ಮಾವನವರ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ ಎಂಬ ಬಗ್ಗೆ ವಿಚಾರಿಸಿದಾಗ ‘ನಿಮಗೆ ಬೋರ್ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್ ಗೆ ಹತ್ತು ಸಾವಿರ ಕೊಡ್ಲಿಕ್ಕೆ ಇದೆ, ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ, ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತಗೊಂಡು ಬನ್ನಿ, ನೀವು ಹಣ ಕೊಟ್ಟರೆ ಮಾತ್ರ ನಿಮಗೆ ಬೋರ್ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ಹೇಳಿರುತ್ತಾರೆ. ಫಿರ್ಯಾದಿದಾರರು ತನ್ನಲ್ಲಿ ಅಷ್ಟು ಹಣ ಇಲ್ಲ ಎಂದು ಹೇಳಿ ವಾಪಾಸು ಬಂದಿರುತ್ತಾರೆ. ಪಂಚಾಯತ್ ಅಧ್ಯಕ್ಷೆ ನಫೀಸಾ ಅವರು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್ವೆಲ್ ಹಾಕಿಸಿ ಕೊಡಲು ರೂ 10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳಿಗೆ ಸಂತ್ರಸ್ತರು ದೂರು ನೀಡಿದ್ದು ಅದರಂತೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ 2024ರ ಆ.15ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದಿದ್ದ  ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರನ್ನು ಆಹ್ವಾನಿಸಲಾಗಿತ್ತು. ವಿಶೇಷ ಅತಿಥಿಯಾಗಿ ಅವರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದರು.

    Post Views: 267

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.