ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆಯೂ ನ್ಯಾಯಾಲಯಕ್ಕೆ ನಳೀನ್ ಕಟೀಲ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ನಳೀನ್ ಕುಮಾರ್ ಕಟೀಲ್ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಎ1 ಆರೋಪಿಯಾಗಿ, ಎ2 ಆರೋಪಿಯಾಗಿ ಇಡಿ, ಎ3 ಆರೋಪಿಯಾಗಿ ಬಿಜೆಪಿ ಪದಾಧಿಕಾರಿಗಳು, ಎ4 ಆರೋಪಿಯಾಗಿ ನಳೀನ್ ಕುಮಾರ್ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಎ5 ಆರೋಪಿಯಾಗಿ ಮಾಡಿ ಎಫ್‌ಐಆರ್ ದಾಖಲಿಸಲಾಗಿದೆ.
ಆದರ್ಶ್ ಅಯ್ಯರ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ತಿಲಕ್ ನಗರದಲ್ಲಿ ಐಪಿಸಿ ಸೆಕ್ಷನ್ 384, 120ಬಿ, 34ರಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.