Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್ : ಹೈಕೋರ್ಟ್ ಮೆಟ್ಟಿಲೇರಿದ ನಳೀನ್ ಕುಮಾರ್ ಕಟೀಲ್
    ಇತ್ತೀಚಿನ ಸುದ್ದಿ

    ಚುನಾವಣಾ ಬಾಂಡ್ ಮೂಲಕ ಸುಲಿಗೆ ಕೇಸ್ : ಹೈಕೋರ್ಟ್ ಮೆಟ್ಟಿಲೇರಿದ ನಳೀನ್ ಕುಮಾರ್ ಕಟೀಲ್

    September 30, 2024
    Share

    ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

    ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ತುರ್ತು ಅರ್ಜಿ ವಿಚಾರಣೆ ನಡೆಸುವಂತೆಯೂ ನ್ಯಾಯಾಲಯಕ್ಕೆ ನಳೀನ್ ಕಟೀಲ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ಬಳಿಕ ನಳೀನ್ ಕುಮಾರ್ ಕಟೀಲ್ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

    ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಎ1 ಆರೋಪಿಯಾಗಿ, ಎ2 ಆರೋಪಿಯಾಗಿ ಇಡಿ, ಎ3 ಆರೋಪಿಯಾಗಿ ಬಿಜೆಪಿ ಪದಾಧಿಕಾರಿಗಳು, ಎ4 ಆರೋಪಿಯಾಗಿ ನಳೀನ್ ಕುಮಾರ್ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಎ5 ಆರೋಪಿಯಾಗಿ ಮಾಡಿ ಎಫ್‌ಐಆರ್ ದಾಖಲಿಸಲಾಗಿದೆ.

    ಆದರ್ಶ್ ಅಯ್ಯರ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ತಿಲಕ್ ನಗರದಲ್ಲಿ ಐಪಿಸಿ ಸೆಕ್ಷನ್ 384, 120ಬಿ, 34ರಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    Post Views: 234

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.