ಉಡುಪಿ: ರಾಜ್ಯ ಸರ್ಕಾರದ ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನ ಜಿಂದಾಬಾದ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗುವುದಿಲ್ಲ. ಗೃಹ ಸಚಿವರಿಗೆ ಬೆದರಿಕೆ ಹಾಕಿದವರಿಗೂ ಏನೂ ಮಾಡಲ್ಲ. ಹೀಗಾಗಿ ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗೂ ಮಂಗಳೂರಿನಲ್ಲಿ ನಡೆದ ದುಷ್ಕೃತ್ಯಕ್ಕೂ ವ್ಯತ್ಯಾಸವಿಲ್ಲ. ಜನರ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಪಲವಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸಿಎಂ ಸಿದ್ಧರಾಮಯ್ಯನವರ ಆಡಳಿತ ಇದ್ದಾಗಲೂ ಹಿಂದೂಗಳ ಸರಣಿ ಕೊಲೆ ನಡೆಯುತ್ತಿದೆ. ಮುಸ್ಲಿಂ ಸಮುದಾಯದಿಂದ ಸಭೆಯಲ್ಲಿ ಗಲಾಟೆ ಮಾಡಿದವರ ಮೇಲೆ ಏನು ಕ್ರಮ ವಹಿಸಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರಿಗೆ ಸುಹಾಸ್ ಮನೆಗೆ ಹೋಗಲು ತಡೆಯೊಡ್ಡಿದ್ದಾರೆ. ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ಕೂಡಾ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ, ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.