ಬ್ರಹ್ಮಾವರ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂದಾಡಿ ಗ್ರಾಮದ ನಿಶಾ ಮೇರಿ ರೋಚ್ ಎಂಬವರಿಗೆ ಅಪರಿಚಿತರು ಮೊಬೈಲ್‌ನಿಂದ ಸಂದೇಶ ಕಳುಹಿಸಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಹಾಗೆ ಇವರು ಜ.23 ಹಾಗೂ 27ರಂದು ಒಟ್ಟು 1,92,750 ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಯಾವುದೇ ಲಾಭಾಂಶವಾಗಲೀ ಹೂಡಿಕೆ ಮಾಡಿದ ಹಣವನ್ನಾಗಲಿ ವಾಪಾಸ್ಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.