Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನಿಂದ ಹಲ್ಲೆ..!!
    ಇತ್ತೀಚಿನ ಸುದ್ದಿ

    ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನಿಂದ ಹಲ್ಲೆ..!!

    April 21, 2026
    Share

    ಮಂಗಳೂರು : ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಏಪ್ರಿಲ್ 18ರಂದು ನಡೆದಿದೆ.

    ಹಲ್ಲೆಯಿಂದ ಗಾಯಗೊಂಡ ಸಿಪಿಸಿ ಪ್ರವೀಣ್ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಪದವು ಕಡೆಯಿಂದ ಬೈಕ್‌ನಲ್ಲಿ ಮಹಿಳೆಯೊಂದಿಗೆ ಬಂದ ಸವಾರನು, ‘ಫ್ರೀ ಲೆಫ್ಟ್’ (Free Left) ರಸ್ತೆಯಲ್ಲಿ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದನು. ಇದರಿಂದ ಇತರ ವಾಹನಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಿದ ಹಲೇಷಾ ಅವರು ಬೈಕನ್ನು ಮುಂದಕ್ಕೆ ಕೊಂಡು ಹೋಗುವಂತೆ ಸೂಚಿಸಿದರು.

    ಇದರಿಂದ ಕೆರಳಿದ ಸವಾರನು ಪೊಲೀಸರನ್ನು “ಬೇವರ್ಸಿ”, “ನಾಯಿಗಳು” ಎಂದು ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸಿಪಿಸಿ ಪ್ರವೀಣ್ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಅಲ್ಲದೆ, ಅವರ ಕೈಯಲ್ಲಿದ್ದ ಸುಮಾರು ₹28,000 ಮೌಲ್ಯದ ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಎಸೆದು ಜಖಂಗೊಳಿಸಿದ್ದಾನೆ. ಜೊತೆಯಲ್ಲಿದ್ದ ಮಹಿಳೆಯು ಕೂಡ ಪೊಲೀಸರಿಗೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಸಮಾಧಾನಪಡಿಸಲು ಯತ್ನಿಸಿದರೂ ಆರೋಪಿಗಳು ಕಿರುಚಾಟ ಮುಂದುವರಿಸಿದ್ದರು. ಈ ಕುರಿತು ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 166

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.