ಮಂಗಳೂರು ಸಮೀಪ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ಮಾದಕ ವಸ್ತು ಸೇರಿದಂತೆ ಅಟೋ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಕೈರಂಗಳದಲ್ಲಿ ಸಂಭವಿಸಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಬಂಧಿತ ಆರೋಪಿಯನ್ನು ಮಂಜನಾಡಿ ಕಲ್ಕಟ್ಟ ನಿವಾಸಿ ನಝೀರ್ (43) ಎಂದು ಗುರುತಿಸಲಾಗಿದೆ.
ಕೈರಂಗಳ ನವಗ್ರಾಮ ಸೈಟ್ ಕ್ರಾಸ್ ರಸ್ತೆಯಲ್ಲಿ ಆರೋಪಿಯು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.