Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ದೇಶವ್ಯಾಪಿ ಕಾರ್ಯಾಚರಣೆಯಲ್ಲಿ ನೀಟ್ ಪೇಪರ್ ಲೀಕ್ ಆರೋಪಿಗಳ ಬಂಧನ
    ಕ್ರೈಂ ಸ್ಟೋರಿ

    ದೇಶವ್ಯಾಪಿ ಕಾರ್ಯಾಚರಣೆಯಲ್ಲಿ ನೀಟ್ ಪೇಪರ್ ಲೀಕ್ ಆರೋಪಿಗಳ ಬಂಧನ

    May 13, 2026
    Share

    ನವದೆಹಲಿ: ಮೇ 3 ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ.

    2026 ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಸಂಘಟಿತ ಅಂತರರಾಜ್ಯ ಜಾಲವನ್ನು ಪತ್ತೆಹಚ್ಚಲಾಗಿದೆ. ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಮನೀಶ್ ಯಾದವ್ ಎಂಬಾತನನ್ನು ಜೈಪುರದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದೆ.ಪರೀಕ್ಷಾ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜಾಲವನ್ನು ಸಂಘಟಿಸುವಲ್ಲಿ ಯಾದವ್ ಪ್ರಮುಖ ಪಾತ್ರ ವಹಿಸಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ರಾಕೇಶ್ ಮಾಂಡವಾರಿಯಾನನ್ನು ಸಹ ಬಂಧಿಸಲಾಗಿದ್ದು, ಸೋರಿಕೆಯಾದ ಪ್ರಶ್ನೆ ಪತ್ರಿಕೆ ಪ್ರಸರಣ ಜವಾಬ್ದಾರಿ ಹೊತ್ತಿದ್ದ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ರಾಜಸ್ಥಾನ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡ ಮತ್ತು ಬಹು ರಾಜ್ಯಗಳ ಪೊಲೀಸ್ ತಂಡಗಳ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಇದುವರೆಗೆ ಐದು ರಾಜ್ಯಗಳಲ್ಲಿ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ. ಸುಮಾರು 45 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ರಾಜಸ್ಥಾನದ ಸಿಕಾರ್ ಮತ್ತು ಜುಂಜುನು ಜಿಲ್ಲೆಗಳು, ಡೆಹ್ರಾಡೂನ್‌ನಿಂದ 15 ಶಂಕಿತರನ್ನು ಬಂಧಿಸಲಾಗಿದೆ. ತನಿಖಾಧಿಕಾರಿಗಳು ಕೋಚಿಂಗ್ ಸೆಂಟರ್‌ಗಳು ಮತ್ತು ಸಂಬಂಧಿತ ಜಾಲಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ರಾಜಸ್ಥಾನ ಪೊಲೀಸರ ಮಾಹಿತಿಯ ಆಧಾರದ ಮೇಲೆ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 131

    PoliceInvestigation

    Related Posts

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.