Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣ: ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆ ತೆರವು
    ಇತ್ತೀಚಿನ ಸುದ್ದಿ

    ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣ: ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆ ತೆರವು

    September 2, 2024
    Share

    ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ.

    ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ (praveen chougalel ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಉಡುಪಿ ನ್ಯಾಯಾ ಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.

    ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮುಹಮ್ಮದ್ ನವಾಜ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರೆಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಿದ್ದಾರೆ. ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಇದೀಗ ಆರೋಪಿ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಆದರೂ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸುವಾಗ ಜೀವ ಬೆದರಿಕೆ ಎದುರಾ ಗುತ್ತದೆ ಎಂಬ ತಪ್ಪು ಗ್ರಹಿಕೆಯನ್ನು ಮಾಡಲಾಗಿದೆ. ಅದಕ್ಕಾಗಿ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ಆರೋಪಿಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಕೂಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು. ಹೈಕೋರ್ಟ್ ತಡೆಯಾಜ್ಞೆಯಿಂದ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಬಾಕಿ ಉಳಿದಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ

    Post Views: 222

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.