Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಮೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ, ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಸಕಲ ಸಿದ್ಧತೆ“ -ಶಾಸಕ ಮಂಜುನಾಥ ಭಂಡಾರಿ
    ಇತ್ತೀಚಿನ ಸುದ್ದಿ

    “ಮೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ, ಅರ್ಥಪೂರ್ಣ ಕಾರ್ಯಕ್ರಮ ಆಚರಣೆಗೆ ಸಕಲ ಸಿದ್ಧತೆ“ -ಶಾಸಕ ಮಂಜುನಾಥ ಭಂಡಾರಿ

    May 15, 2025
    Share

    ಮಂಗಳೂರು: “ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಳ್ಳಲಿದೆ” ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

    ಸಿದ್ದರಾಮಯ್ಯ ಅವರು ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಅವಿಸ್ಮರಣೀಯಗೊಳಿಸಬೇಕು ಎಂಬ ನಿಟ್ಟಿನಲ್ಲಿ ಅಂದು 8000 ಮಂದಿ ಫಲಾನುಭವಿಗಳಿಗೆ ಮನೆಯ ಆರ್ ಟಿಸಿ ವಿತರಣೆ, ಅಲ್ಪಸಂಖ್ಯಾತ ನಿಗಮ, ಅಂಬೇಡ್ಕರ್ ನಿಗಮ ಸಹಿತ ಮೂರು ನಿಗಮಗಳ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ“ ಎಂದರು.


    ”ಅದೇ ದಿನ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ 8 ವರ್ಷಗಳ ಹಿಂದೆಯೇ ಶಿಲಾನ್ಯಾಸ ನೆರವೇರಿತ್ತಾದರೂ ಅದು ಸಂಪೂರ್ಣಗೊಂಡಿರಲಿಲ್ಲ. ನಾನು, ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭಾ ಅಧ್ಯಕ್ಷರು ಸೇರಿ ಎರಡು ಮೂರು ಬಾರಿ ಜಿಲ್ಲಾಧಿಕಾರಿ ಕಚೇರಿಯನ್ನು ಪೂರ್ತಿಗೊಳಿಸಲು ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿಯನ್ನು ಮಾಡಿದ್ದೆವು. ನಂತರ ಅವರನ್ನು ಕರೆದುಕೊಂಡು ಬಂದು ತೋರಿಸಿದಾಗ ಹೆಚ್ಚುವರಿ 30 ಕೋಟಿ ರೂ. ಅಂದಾಜು ಅನುದಾನ ಬೇಕಾಗಬಹುದು ಎಂದು ಮನವಿ ಮಾಡಿದಂತೆ ಅವರು ವಿಶೇಷ ಮುತುವರ್ಜಿ ವಹಿಸಿ 20 ಕೋಟಿ ರೂ. ಅನ್ನು ಬಿಡುಗಡೆ ಮಾಡಿ ಕಟ್ಟಡ ಪೂರ್ಣಗೊಳ್ಳಲು ಸಹಕರಿಸಿದ್ದಾರೆ. ಸುಮಾರು 75 ಕೋಟಿ ರೂ. ವೆಚ್ಚದಲ್ಲಿ 22 ಬೇರೆ ಬೇರೆ ಇಲಾಖೆಗಳ ಕಚೇರಿಗಳನ್ನು ಒಂದೇ ಕಡೆ ನಿರ್ಮಾಣ ಮಾಡುವ ಮೂಲಕ ಜನರಿಗೆ ತಮ್ಮ ಕೆಲಸವನ್ನು ಸುಸುತ್ರವಾಗಿ ಮಾಡಲು ಅವಕಾಶ ಕಲ್ಪಿಸಲಾಗಿದೆ“ ಎಂದರು.


    ”ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಫಲಾನುಭವಿಗಳ ಜೊತೆ ಚುನಾಯಿತ ಜನಪ್ರತಿನಿಧಿಗಳನ್ನು ಕೂಡಾ ಆಮಂತ್ರಿಸಲಾಗಿದೆ. ಈಗಾಗಲೇ ಚುನಾವಣೆಗೆ ಸ್ಪರ್ಧಿಸಿದ್ದ ನಾಯಕರು, ಪಕ್ಷದ ಪ್ರಮುಖರು, ನಾಯಕರ ಜೊತೆ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಣಯಿಸಲಾಗಿದೆ“ ಎಂದು ಮಾಹಿತಿ ನೀಡಿದರು.

    ಪತ್ರಿಕಾಗೋಷ್ಟಿಯಲ್ಲಿ ಮಿಥುನ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ಬಾವ, ಎಂ.ಎಸ್. ಮುಹಮ್ಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ರಕ್ಷಿತ್ ಶಿವರಾಮ್, ಸಾಹುಲ್ ಹಮೀದ್ ಕೆ, ಸುಹಾನ್ ಆಳ್ವ, ಬಶೀರ್ ಕಣ್ಣೂರ್, ಶುಭೋದಯ ಆಳ್ವಾ, ನಝೀರ್ ಬಜಾಲ್ ಉಪಸ್ಥಿತರಿದ್ದರು.

    Post Views: 208

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.