Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಯನಾಡು ದುರಂತದಿಂದ ಅನಾಥರಾದ ಯುವತಿಯರಿಗೆ ಹೊಸ ಬದುಕು ನೀಡಲು ಮುಂದೆ ಬಂದ ಯುವಕರು!
    ಇತ್ತೀಚಿನ ಸುದ್ದಿ

    ವಯನಾಡು ದುರಂತದಿಂದ ಅನಾಥರಾದ ಯುವತಿಯರಿಗೆ ಹೊಸ ಬದುಕು ನೀಡಲು ಮುಂದೆ ಬಂದ ಯುವಕರು!

    August 8, 2024
    Share

    ಮನ್ನಾರ್​: ಪ್ರಕೃತಿಯ ವಿಕೋಪಕ್ಕೆ ನಲುಗಿ ಸರ್ವಸ್ವವನ್ನೂ ಕಳೆದುಕೊಂಡ ಕೇರಳದ ವಯನಾಡಿಗೆ ದೇಶದ ನಾನಾ ಕಡೆಯಿಂದ ನೆರವಿನ ಮಹಾಪೂರ ಹರಿದು ಬರುತ್ತಿದೆ. ಭೂಕುಸಿತ ದುರಂತ ಪೀಡಿತ ಕುಟುಂಬದ ಹೆಣ್ಣುಮಕ್ಕಳಿಗೆ ಬದುಕು ಕಟ್ಟಿಕೊಳ್ಳಲು ಇದೀಗ ಇಬ್ಬರು ಯುವಕರು ಮುಂದೆ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಬೂದನೂರು ತಯ್ಯೂರು ಮೂಲದ ವಿಷ್ಣುಕುಮಾರ್ (30) ಮತ್ತು ಮಾವೇಲಿಕ್ಕರ ಮೂಲದ ದೀಪುರಾಜ್ (31) ಹೆಸರಿನ ಇಬ್ಬರು ಯುವಕರು ಆಪತ್ಕಾಲದಲ್ಲಿ ತಮ್ಮ ಕುಟುಂಬವನ್ನೇ ಕಳೆದುಕೊಂಡು ಅನಾಥರಾದ ಯುವತಿಯರಿಬ್ಬರಿಗೆ ಮದುವೆ ಎಂಬ ಬಂಧನ ಮೂಲಕ ಉಜ್ವಲ ಬದುಕು ಕಟ್ಟಿಕೊಡಲು ಮುಂದಾಗಿದ್ದಾರೆ.

    ಮಧ್ಯಪ್ರದೇಶದಲ್ಲಿ ಕಂಪನಿಯ ಕೆಲಸ ಬಿಟ್ಟಾಗ ಸಿಕ್ಕ ಹಣದಲ್ಲಿ ಅಕ್ಕನ ಮನೆಯ ಸಮೀಪವೇ ಮನೆ ಕಟ್ಟಲು ಆರಂಭಿಸಿದ ವಿಷ್ಣು, ಈಗ ಮನ್ನಾರ್​ನ ಇರಮತ್ತೂರು ಮುಂದುವೆಲ್​ನಲ್ಲಿ ನೆಲೆಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಮನನೊಂದ ತಾಯಿಯ ಕೋರಿಕೆಯಂತೆ ವಿಷ್ಣು ಈ ನಿರ್ಧಾರಕ್ಕೆ ಬಂದಿದ್ದಾರೆ. ಡ್ರೈವಿಂಗ್ ಗೊತ್ತಿರುವುದರಿಂದ ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿರುವ ವಿಷ್ಣು, ವಯನಾಡಿನ ಸೂಕ್ತ ಯುವತಿಯೊಬ್ಬಳನ್ನು ಜೀವನ ಸಂಗಾತಿಯಾಗಿ ಪಡೆಯಲಿದ್ದಾರೆ.

    ಮಿಮಿಕ್ರಿ, ಜಾನಪದ ಗೀತೆಗಳಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತು ಪಡಿಸಿರುವ ದೀಪುರಾಜ್, ಖಾಸಗಿ ಬಸ್​ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಕುಟ್ಟನಾಡ್ ನಡನ್ ಪಟ್ ಕಲಾ ಸಮಿತಿಯೊಂದಿಗೆ ಕಾರ್ಯಕ್ರಮಗಳನ್ನು ನೀಡುತ್ತಿದ್ದ ಈ ಯುವಕ ಚೆಟ್ಟಿಕುಲಂಗರದಲ್ಲಿ ನಿವೇಶನ ಖರೀದಿಸಿ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮದುವೆ ಬಯಕೆಯನ್ನು ಹಂಚಿಕೊಂಡ ನಂತರ ವಯನಾಡಿನಿಂದ ದೀಪು ಅವರನ್ನು ಅರಸಿ ಹಲವು ಫೋನ್ ಕರೆಗಳು ಬರುತ್ತಿವೆ. ಶನಿವಾರ ಸಂಜೆ ದೀಪುರಾಜ್ ವಯನಾಡಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಈ ವೇಳೆ ದೀಪುವಿನ ಸಹೋದರಿಯರು ಸೋನಿ ಮತ್ತು ಕಿಂಗಿಣಿ ಕೂಡ ಸಾಥ್​ ನೀಡಲಿದ್ದಾರೆ.

    ಇದೇ ರೀತಿ ಸಾಕಷ್ಟು ಯುವಕರು ಅನಾಥರಾದ ಹೆಣ್ಣು ಮಕ್ಕಳಿಗೆ ಜೀವನ ಕೊಡಲು ಮುಂದೆ ಬರುತ್ತಿದ್ದಾರೆಂದು ತಿಳಿದುಬಂದಿದೆ. ಈ ಮಹಾ ದುರಂತದಿಂದ ತತ್ತರಿಸಿರುವ ವಯನಾಡಿಗೆ ಅನೇಕ ಸೆಲೆಬ್ರಿಟಿಗಳು ನೆರವಿನ ಹಸ್ತವನ್ನು ಚಾಚಿದ್ದಾರೆ.

    Post Views: 302

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.