Facebook Twitter Instagram
    Sunday, September 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕೆ ಇಳಿಕೆ – ಹೊಸ ನೀತಿ ಜಾರಿ
    ಇತ್ತೀಚಿನ ಸುದ್ದಿ

    ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕೆ ಇಳಿಕೆ – ಹೊಸ ನೀತಿ ಜಾರಿ

    May 13, 2026
    Share

    ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ದೇಶದ ಜನತೆಗೆ ಚಿನ್ನ ಖರೀದಿ ಕಡಿಮೆ ಮಾಡಲು ಮತ್ತು ಇಂಧನ ಮಿತವಾಗಿ ಬಳಸಲು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ತಮ್ಮದೇ ಭದ್ರತಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಆರಂಭಿಸಿದ್ದಾರೆ.

    ಪ್ರಧಾನಿ ಕಚೇರಿ ಎಸ್‌ಪಿಜಿ ಭದ್ರತಾ ಪಡೆಯ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಶೇ.50 ರಷ್ಟು ಕಡಿತಗೊಳಿಸಲು ಸೂಚನೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದರ ಜೊತೆಗೆ, ಪೆಟ್ರೋಲ್ ಮತ್ತು ಡೀಸೆಲ್ ಚಾಲಿತ ವಾಹನಗಳ ಬದಲಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ.ಭಾರತವು ಕಚ್ಚಾ ತೈಲ, ಚಿನ್ನ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಹಲವು ಅಗತ್ಯ ವಸ್ತುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಇದರಿಂದ ದೇಶದ ವಿದೇಶಿ ವಿನಿಮಯ ಸಂಗ್ರಹದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ ಎಂದು ಪ್ರಧಾನಿ ಮೋದಿ ಇತ್ತೀಚೆಗೆ ಜನತೆಗೆ ನೀಡಿದ ಸಂದೇಶದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆ, ಜನರು ಅನಗತ್ಯ ಖರೀದಿ ಹಾಗೂ ಇಂಧನ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕರೆ ನೀಡಿದ್ದ ಅವರು, ಇದೀಗ ತಮ್ಮದೇ ಭದ್ರತಾ ವ್ಯವಸ್ಥೆಯಲ್ಲಿ ಮಿತವ್ಯಯದ ಕ್ರಮಗಳನ್ನು ಜಾರಿಗೆ ತಂದು ಮಾದರಿಯಾಗಿದ್ದಾರೆ.ಎಸ್‌ಪಿಜಿ ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸುವ ಜೊತೆಗೆ, ಭದ್ರತಾ ಪಡೆಯಲ್ಲೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರದಿಂದ ಇಂಧನ ಉಳಿತಾಯವಾಗುವುದರ ಜೊತೆಗೆ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ, ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಕಡಿಮೆಯಾಗುವುದರಿಂದ ರಸ್ತೆ ಸಂಚಾರದ ವೇಳೆ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಕೂಡ ಕಡಿಮೆಯಾಗುವ ನಿರೀಕ್ಷೆಯಿದೆ.ಈ ಕ್ರಮಗಳು ಕೇವಲ ಪ್ರಧಾನಿ ಕಚೇರಿಗೆ ಮಾತ್ರ ಸೀಮಿತವಾಗಿಲ್ಲ. ಕೇಂದ್ರ ಸಚಿವರು ಹಾಗೂ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಇಂಧನ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ, ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಅದರ ಜೊತೆಗೆ, ಭದ್ರತಾ ಬೆಂಗಾವಲು ಪಡೆಯ ಗಾತ್ರವನ್ನು ಸಾಧ್ಯವಾದಷ್ಟು ಕಡಿಮೆ ಇಡುವಂತೆ ಸಲಹೆ ನೀಡಲಾಗಿದೆ. ಇಂಧನ ಉಳಿತಾಯ ಮತ್ತು ಪರಿಸರ ಸಂರಕ್ಷಣೆ ಕುರಿತು ಸರ್ಕಾರದ ಈ ಹೊಸ ಕ್ರಮ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ನಾಂದಿ ಹಾಡುವ ಸಾಧ್ಯತೆ ಇದೆ.

    Post Views: 233

    PoliceInvestigation

    Related Posts

    ಮಂಗಳೂರು: ವಿದ್ಯಾರ್ಥಿಗಳ ಕಾರ್ಯಕ್ರಮ ವೇಳೆ ಸಭಾಭವನದ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು 4 ಮಂದಿ ವಿದ್ಯಾರ್ಥಿಗಳಿಗೆ ಗಾಯ,ಓರ್ವ ಗಂಭೀರ

    September 26, 2026

    ಮಂಗಳೂರು: ಪಡೀಲ್ ನ ಹುಂಡೈ ಶೋರೂಂನಲ್ಲಿ ಆಕಸ್ಮಿಕ ಬೆಂಕಿ – 3 ಕಾರುಗಳು ಭಸ್ಮ

    September 26, 2026

    ಬಂಟ್ವಾಳ: ಅಕ್ರಮ ಮರಳುಗಾರಿಕೆ ಮೇಲೆ ಪೊಲೀಸರ ದಾಳಿ; ₹25.24 ಲಕ್ಷ ಮೌಲ್ಯದ ವಾಹನ, ಮರಳು ವಶ

    September 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿಗಳ ಕಾರ್ಯಕ್ರಮ ವೇಳೆ ಸಭಾಭವನದ ಬಾಲ್ಕನಿ ತಡೆಗೋಡೆ ಕುಸಿದು ಬಿದ್ದು 4 ಮಂದಿ ವಿದ್ಯಾರ್ಥಿಗಳಿಗೆ ಗಾಯ,ಓರ್ವ ಗಂಭೀರ

    September 26, 2026

    ಮಂಗಳೂರು: ಪಡೀಲ್ ನ ಹುಂಡೈ ಶೋರೂಂನಲ್ಲಿ ಆಕಸ್ಮಿಕ ಬೆಂಕಿ – 3 ಕಾರುಗಳು ಭಸ್ಮ

    September 26, 2026

    ಬಂಟ್ವಾಳ: ಅಕ್ರಮ ಮರಳುಗಾರಿಕೆ ಮೇಲೆ ಪೊಲೀಸರ ದಾಳಿ; ₹25.24 ಲಕ್ಷ ಮೌಲ್ಯದ ವಾಹನ, ಮರಳು ವಶ

    September 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.