Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೊಸ ದರ ಇಂದಿನಿಂದಲೇ ಜಾರಿ ಸಾಧ್ಯತೆ
    ಇತ್ತೀಚಿನ ಸುದ್ದಿ

    ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹೊಸ ದರ ಇಂದಿನಿಂದಲೇ ಜಾರಿ ಸಾಧ್ಯತೆ

    December 4, 2022
    Share

    ಉಡುಪಿ: ಜನರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೇ ಹೆಜಮಾಡಿ ಟೋಲ್‌ನಲ್ಲಿ ವಾಹನಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣ ವಾಗಿದೆ. ಸಾರ್ವಜನಿಕರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.

    ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳೂ ಸುರತ್ಕಲ್‌ ಟೋಲ್‌ನ ದರವನ್ನು ಹೆಜಮಾಡಿಯಲ್ಲಿ ಸಂಗ್ರಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ.

    ಆದರೂ ಇದಾವುದಕ್ಕೂ ಟೋಲ್‌ ಗುತ್ತಿಗೆಯ ಕಂಪೆನಿಯಾಗಲೀ ಅಥವಾ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಾಗಲೀ ಬೆಲೆಯೇ ಕೊಡದಿರುವುದೂ ಜನಾಕ್ರೋಶವನ್ನು ಹೆಚ್ಚಿಸಿದೆ.

    ಹೆಜಮಾಡಿ ಟೋಲ್‌ ದರ ಪರಿಷ್ಕರಣೆ ವಿಷಯವಾಗಿ ಡಿ. 5ರಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಸಚಿವ ನಿತಿನ್‌ ಗಡ್ಕರಿಯವರು ವಿಶೇಷ ಸಭೆ ನಡೆಸುವುದಾಗಿ ಶಾಸಕ ಕೆ. ರಘುಪತಿ ಭಟ್‌ ಅವರಿಗೆ ಭರವಸೆ ನೀಡಿದ್ದರು. ಹಾಗೆಯೇ ಡಿ. 3ರಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ, ಇಂಧನ ಸಚಿವ ಸುನಿಲ್‌ ಕುಮಾರ್‌ ಸಹಿತ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

    ಮುಖ್ಯಮಂತ್ರಿಯವರ ಜತೆ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸುವವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದರು. ಆದರೂ ಈಗ ಅಧಿಕಾರಿಗಳು ಡಿ. 4ರಿಂದಲೇ ಟೋಲ್‌ ದರವನ್ನು ಹೆಚ್ಚಿಸಲು ಮುಂದಾಗಿರುವುದು ವಿರೋಧಕ್ಕೆ ಕಾರಣವಾಗಿದೆ.

    Post Views: 198

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.