Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸರ್ಕಾರಿ ಕಚೇರಿಗಳಲ್ಲಿ ಹೊಸ ರೂಲ್ಸ್ :ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರು ಕಡ್ಡಾಯ
    ಇತ್ತೀಚಿನ ಸುದ್ದಿ

    ಸರ್ಕಾರಿ ಕಚೇರಿಗಳಲ್ಲಿ ಹೊಸ ರೂಲ್ಸ್ :ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರು ಕಡ್ಡಾಯ

    June 5, 2026
    Share

    ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ.ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ `ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನ ನೋಂದಾಯಿಸಲಾಗಿದೆ. ಆದ್ರೆ ಬಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶವನ್ನ (App) ನಿರಂತರವಾಗಿ ಬಳಸುತ್ತಿಲ್ಲದಿರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ.ಸರ್ಕಾರದ ನಿರ್ದೇಶನಗಳೇನು?ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆ 10 ಗಂಟೆಗೆ ʻಕರ್ತವ್ಯ ಆ್ಯಪ್ʼ ನಲ್ಲಿ ಹಾಜರಾತಿಯನ್ನು Check In ನಲ್ಲಿ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ Check Out ನಲ್ಲಿ ಕರ್ತವ್ಯ ಆ್ಯಪ್ ಬಳಸುವ ವಿಧಾನಗಳನ್ನ ವೀಕ್ಷಣೆ ಮಾಡುವುದು.ಇ-ಆಡಳಿತ ಇಲಾಖೆಯು ಪ್ರತಿದಿನ ಬೆಳಗ್ಗೆ 10 ಗಂಟೆಗೆ ಹಾಜರಾತಿ ದಾಖಲಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲಾವಾರು ಹಾಗೂ ಕಚೇರಿವಾರು ಮಾಹಿತಿಯನ್ನ AI (ಕೃತಕ ಬುದ್ಧಿಮತ್ತೆ) ಆ್ಯಪ್ ಮೂಲಕ ಆಯಾ ಇಲಾಖಾ ಮುಖ್ಯಸ್ಥರಿಗೆ ಸ್ವಯಂಚಾಲಿತವಾಗಿ ವರದಿ ಕಳುಹಿಸುವಂತೆ ನಿರ್ದೇಶನ ನೀಡಿದ್ದಾರೆ.ಈಗಾಗಲೇ ಶಿಕ್ಷಣ ಇಲಾಖೆಯು ನೂತನ ತಂತ್ರಜ್ಞಾನವುಳ್ಳ ಆ್ಯಪ್‌ ಆಧರಿತ ಹಾಜರಾತಿ ನಿರ್ವಹಣೆ ಅಳವಡಿಸಿಕೊಂಡಿದೆ. ಇದೀಗ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಿಗೂ ಈ ವ್ಯವಸ್ಥೆಯನ್ನ ವಿಸ್ತರಣೆ ಮಾಡಿದೆ.

    Post Views: 134

    dakshina kannada karnataka

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.