Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ

    December 31, 2025
    Share

    ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

    ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

    ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್, ಅಸಭ್ಯ ವರ್ತನೆ ಸೇರಿದಂತೆ ಸಾರ್ವಜನಿಕ ಕಿರುಕುಳದ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

    ಹೊಸ ವರ್ಷಾಚರಣೆ ಹಿನ್ನೆಲೆ ನಗರದಾದ್ಯಂತ ಭದ್ರತಾ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟ್ ಪಾಯಿಂಟ್ಗಳು, ಚೆಕ್ಪೋಸ್ಟ್ಗಳು ಹಾಗೂ ರೌಂಡ್ಸ್ ಕರ್ತವ್ಯಗಳಿಗೆ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ಆರ್ಪಿ ತುಕಡಿಗಳು, ಎಫ್ಎಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನೂ ನಿಯೋಜಿಸಲಾಗಿದೆ.

    ಸಾರ್ವಜನಿಕರು ಯಾವುದೇ ತುರ್ತು ದೂರುಗಳಿಗಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದ್ದು, 112 ಸಂಪರ್ಕ ಸಾಧ್ಯವಾಗದಿದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದು ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 87

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.