ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.
ಇಂದು ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ, ಪ್ರತ್ಯೇಕ ಮಾರ್ಗಸೂಚಿ ಇಲ್ಲ.
ಹಾಗಂತ ಎಚ್ಚರ ವಹಿಸದೇ ಇರಬೇಡಿ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿಲ್ಲ, ಜನರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕು.
ಇದುವರೆಗೆ ಕೊರೊನಾ ಸೋಂಕಿಗೆ 7 ಮಂದಿ ಮೃತಪಟ್ಟಿದ್ದಾರೆ, 36 ಜನರಿಗೆ ಜೆಎನ್ 1 ಸೋಂಕು ತಗುಲಿರುವುದು ಧೃಡವಾಗಿದೆ. ಮಕ್ಕಳಿಗೆ ಶೀತ, ಜ್ವರ ಬಂದರೆ ಶಾಲೆಗಳಿಗೆ ಕಳುಹಿಸಬೇಡಿ. ನ್ಯೂ ಇಯರ್ ಗೆ ಯಾವುದೇ ಗೈಡ್ ಲೈನ್ಸ್ ಇರುವುದಿಲ್ಲ. ಕೋವಿಡ್ ಸೋಂಕಿತರು 1 ವಾರ ಮನೆಯಲ್ಲಿರಬೇಕು. ಕೊರೊನಾ ಸೋಂಕು ತಗುಲಿದರೆ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಕೊಡಬೇಕು ಎಂಬ ಆದೇಶವನ್ನು ಶೀಘ್ರವೇ ಹೊರಡಿಸಲಾಗುತ್ತದೆ. ಕೊರೊನಾ ಸೋಂಕಿತರ ಮೇಲೆ ಆರೋಗ್ಯ ಇಲಾಖೆ ಅಧಿಕಾರಗಳು ತೀವ್ರ ನಿಗಾ ವಹಿಸಿದ್ದಾರೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಐಸಿಯು, ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.