Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ಕ-ತಮ್ಮ ಸಂಬಂಧದ ನಡುವೆಯೂ ಪ್ರೇಮ ವಿವಾಹ, ನವಜೋಡಿಯಿಂದ ಪೊಲೀಸ್ ರಕ್ಷಣೆ ಕೋರಿಕೆ
    ಇತ್ತೀಚಿನ ಸುದ್ದಿ

    ಅಕ್ಕ-ತಮ್ಮ ಸಂಬಂಧದ ನಡುವೆಯೂ ಪ್ರೇಮ ವಿವಾಹ, ನವಜೋಡಿಯಿಂದ ಪೊಲೀಸ್ ರಕ್ಷಣೆ ಕೋರಿಕೆ

    May 7, 2026
    Share

    ಚಿಕ್ಕಬಳ್ಳಾಪುರ: ಪ್ರೀತಿ ಕುರುಡು ಎಂಬ ಮಾತಿಗೆ ಸಾಕ್ಷಿಯೆಂಬಂತೆ, ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗಿ ಪೋಷಕರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ರಕ್ಷಣೆ ನೀಡುವಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

    ಪೋಷಕರ ವಿರೋಧದ ನಡುವೆ ಮದುವೆ

    ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ವರಸೆಯಲ್ಲಿ ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು. ಅಲ್ಲದೆ, ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನನ್ನು ಮದುವೆಯಾಗಿದ್ದಾಳೆ.

    ಪೊಲೀಸ್ ರಕ್ಷಣೆ ಕೋರಿದ ನವಜೋಡಿ

    ಮದುವೆಯಾದ ಬಳಿಕ ಈ ಜೋಡಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ‘ನಾವು ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ನಮ್ಮ ಪಾಡಿಗೆ ಬದುಕಲು ಬಿಡಿ’ ಎಂದು ಶಶಿಕಲಾ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಇತ್ತ ಪೋಷಕರು ‘ವರಸೆಯಲ್ಲಿ ತಮ್ಮನಾಗುವವನನ್ನೇ ಮದುವೆಯಾಗಿ ಇಡೀ ಕುಟುಂಬಕ್ಕೆ ಅವಮಾನ ತಂದಿದ್ದೀಯಾ’ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಿತ್ರ ಮದುವೆ ಪ್ರಕರಣ ಸ್ಥಳೀಯವಾಗಿ ಭಾರೀ ಚರ್ಚೆಗೆ ಕಾರಣವಾಗಿದೆ.

    Post Views: 172

    karnataka PoliceInvestigation

    Related Posts

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.