Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹೆದ್ದಾರಿ ಗುಂಡಿಯಿಂದ ವ್ಯಕ್ತಿ ಸಾವು ಪ್ರಕರಣ- NHAI ನೋಟಿಸ್ ಜಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಹೆದ್ದಾರಿ ಗುಂಡಿಯಿಂದ ವ್ಯಕ್ತಿ ಸಾವು ಪ್ರಕರಣ- NHAI ನೋಟಿಸ್ ಜಾರಿ

    July 21, 2023
    Share

    ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ – ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಟೈಟಸ್ ಫೆರಾವೊ (69) ಎಂಬವರು ಹೆದ್ದಾರಿಗುಂಡಿಗೆ ಬಿದ್ದು ಅವರ ಮೇಲೆಯೇ ಲಾರಿ ಹರಿದು ಮೃತಪಟ್ಟಿದ್ದರು. ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಿಲ್ಲದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಮಂಗಳೂರು ಪೊಲೀಸರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಕೆಂಜಾರು ನಿವಾಸಿ ಟೈಟಸ್ ಫೆರಾವೊ (69) ಅವರು ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಚಲಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಗುಂಡಿಯಿಂದ ಅಪಘಾತ ಸಂಭವಿಸಿದ್ದಲ್ಲಿ ರಸ್ತೆ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆದ್ದರಿಂದ ರಸ್ತೆ ಗುಂಡಿಯಿಂದ ಸಂಭವಿಸುವ ಅಪಘಾತದಲ್ಲಿ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಕೇಳಿಬಂದಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ ‘ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.