ಬಂಟ್ವಾಳ: ಪಾಟ್ನಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿದೆ.
ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಆರೋಪಿಗಳು ಪಾಟ್ನಾದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದರು ಎನ್ನಲಾಗಿದೆ.ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ನಿನ್ನೆ ಸಂಜೆ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.