Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳ : ಬಾಲಕನಲ್ಲಿ ನಿಫಾ ವೈರಸ್ ಪತ್ತೆ,‌ ಸಂಪರ್ಕಿತರಿಗೆ ಕ್ವಾರಂಟೈನ್
    ಇತ್ತೀಚಿನ ಸುದ್ದಿ

    ಕೇರಳ : ಬಾಲಕನಲ್ಲಿ ನಿಫಾ ವೈರಸ್ ಪತ್ತೆ,‌ ಸಂಪರ್ಕಿತರಿಗೆ ಕ್ವಾರಂಟೈನ್

    July 21, 2024
    Share

    ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

    14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕನಿಗೆ ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಸುತ್ತು ಮುತ್ತ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವೆ ಮನವಿ ಮಾಡಿದ್ದಾರೆ. ಜನರು ಯಾವದೇ ಭಯ ಪಡುವ ಅಗತ್ಯವಿಲ್ಲ. ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ಬಳಸಬಾರದು. ಹಣ್ಣುಗಳನ್ನು ತೊಳೆದು ಉಪಯೋಗಿಸಬೇಕು. ನಿಫಾ ವೈರಸ್ ರೋಗ ಲಕ್ಷಣಗಳನ್ನು ಕುರಿತು ಜನರಿಗೆ ಅರಿವು ಮೂಡಿಸಲು ಸೂಚಿಸಲಾಗಿದೆ ಎಂದು ವೀಣಾ ಜಾರ್ಜ್ ಮಾಹಿತಿ ನೀಡಿದ್ದಾ

    Post Views: 187

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.