Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸುಖಾ ಸುಮ್ನೆ ಇನ್ಮುಂದೆ ಚೆಕ್ ಕೊಡಾಂಗಿಲ್ಲ..ಜೋಕೆ.!
    ಇತ್ತೀಚಿನ ಸುದ್ದಿ

    ಮಂಗಳೂರು: ಸುಖಾ ಸುಮ್ನೆ ಇನ್ಮುಂದೆ ಚೆಕ್ ಕೊಡಾಂಗಿಲ್ಲ..ಜೋಕೆ.!

    October 14, 2022
    Share

    ಮಂಗಳೂರು: ಹುಷಾರ್ , ಇನ್ನುಂದೆ ನೀವೂಗಳು ಯಾರಿಗಾದ್ರೂ ಚೆಕ್ ಕೊಡ್ತೀರಾ ಜಾಗೃತೆ ವಹಿಸಿ, ನಿಮ್ಮ ಚೆಕ್ ಇಶ್ಯೂ ಮಾಡಿದ ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲದಿದ್ದರೆ ನಿಮ್ಮ ಇತರ ಬ್ಯಾಂಕ್ ಖಾತೆಗಳಿದ್ದರೆ ಅವುಗಳಿಂದ ಹಣವನ್ನು ವಿತ್‌ ಡ್ರಾ ಮಾಡಿ ಚೆಕ್ ಸ್ವೀಕಾರ ಮಾಡಿದ ಗ್ರಾಹಕರಿಗೆ ನೀಡಲಾವುದು. ಈ ಈ ವಿಚಾರಗಳ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಲಿದೆ.

    ದೇಶದಲ್ಲಿ ಹೆಚ್ಚುತ್ತಿರುವ ಚೆಕ್‌ ಬೌನ್ಸ್‌ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿ ತರಲು ಕೇಂದ್ರ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ದೇಶದಲ್ಲಿ ಚೆಕ್‌ ಬೌನ್ಸ್‌ ಪ್ರಕರಣಗಳ ಸಂಖ್ಯೆ ದಿನದಿಂದಿ ದಿನಕ್ಕೆ ಹೆಚ್ಚುತ್ತಲಿವೆ. ಇದರಿಂದ ನ್ಯಾಯಾಂಗದ ಮೇಲೆ ಹೆಚ್ಚಿನ ಹೊರೆಯಾಗುತ್ತಿದ್ದು, ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಂತಹ ಪ್ರಕರಣಗಳ ಸಂಖ್ಯೆ ಇಳಿಸುವ ನಿಟ್ಟಿನಲ್ಲಿ ಇತ್ತೀಚೆಗಷ್ಟೇ ವಿತ್ತ ಸಚಿವಾಲಯ ಕರೆದಿದ್ದ ಉನ್ನತ ಮಟ್ಟದ ಸಭೆಯಲ್ಲಿ ಹಲವು ಕ್ರಮಗಳ ಕುರಿತು ಸಲಹೆಗಳು ಕೇಳಿಬಂದಿವೆ. ಯಾವುದೇ ಒಬ್ಬ ವ್ಯಕ್ತಿ ನೀಡಿದ ಚೆಕ್‌ ಬೌನ್ಸ್‌ ಆದರೆ ಅಥವಾ ಆತನ ಖಾತೆಯಲ್ಲಿ ಸಾಕಷ್ಟು ಹಣ ಇಲ್ಲದೇ ಇದ್ದರೆ ಆಗ ಅದೇ ವ್ಯಕ್ತಿಯ ಮತ್ತೊಂದು ಬ್ಯಾಂಕ್‌ ಖಾತೆಯಿಂದ ಹಣ ಡೆಬಿಟ್‌ ಮಾಡುವುದು, ಚೆಕ್‌ ಬೌನ್ಸ್‌ ಅನ್ನು ಸುಸ್ತಿ ಸಾಲವೆಂದು ಪರಿಗಣಿಸಿ ಆತನ ಕ್ರೆಡಿಟ್ ಸ್ಕೋರ್‍ಅನ್ನು ಕೆಳಮಟ್ಟಕ್ಕಿಳಿಸುವಂತೆ ಕ್ರೆಡಿಟ್‌ ಇನಾರ್ಮೇಷನ್‌ ಕಂಪನಿಗಳಿಗೆ ವರದಿ ನೀಡುವುದು, ಚೆಕ್‌ ನೀಡಿದ ವ್ಯಕ್ತಿ ಹೊಸ ಖಾತೆ ತೆರೆಯುವುದಕ್ಕೆ ನಿರ್ಬಂಧ ಹೇರುವುದು ಮುಂತಾದ ಅನೇಕ ಕ್ರಮಗಳು ಈಗ ಸಚಿವಾಲಯದ ಮುಂದಿವೆ. ಈ ಎಲ್ಲ ಸಲಹೆಗಳ ಕುರಿತು ಸೂಕ್ತ ಕಾನೂನು ಸಲಹೆಗಳನ್ನು ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಸಲಹೆಗಳನ್ನು ಒಪ್ಪಿಕೊಳ್ಳುವ ಮೊದಲು ಕಾನೂನಿನಡಿ ಇವು ಎಷ್ಟು ಸರಿ ಎಂಬುದನ್ನು ಪರಿಶೀಲಿಸಲಾಗುವುದು ಅಂತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸುಧಾರಣಾ ಕ್ರಮಗಳಿಂದ ದೇಶದಲ್ಲಿ ವಾಣಿಜ್ಯ ವಹಿವಾಟು ನಡೆಸುವುದು ಇನ್ನಷ್ಟು ಸುಲಭ ಆಗಲಿದೆ. ಖಾತೆಯಲ್ಲಿ ಕಡಿಮೆ ಹಣ ಇದ್ದಾಗಲೂ, ಉದ್ದೇಶಪೂರ್ವಕವಾಗಿ ಹೆಚ್ಚಿನ ಮೊತ್ತಕ್ಕೆ ಚೆಕ್ ನೀಡುವ ಪರಿಪಾಠಕ್ಕೆ ಕಡಿವಾಣ ಬೀಳುತ್ತದೆ ಅನ್ನೋ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

    Post Views: 237

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.