Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತರ ದೈಹಿಕ ಸಂಪರ್ಕಕ್ಕೆ ಅನುಮತಿ ಇಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ
    ಇತ್ತೀಚಿನ ಸುದ್ದಿ

    ಅಪ್ರಾಪ್ತರ ದೈಹಿಕ ಸಂಪರ್ಕಕ್ಕೆ ಅನುಮತಿ ಇಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ

    April 5, 2023
    Share

    ಬೆಂಗಳೂರು: 18 ವರ್ಷದೊಳಗಿನ ಅಪ್ರಾಪ್ತರಿಗೆ ಪ್ರೀತಿ ಮಾಡಲು ಅನುಮತಿ ಇರಬಹುದೇನೋ ಆದರೆ ದೈಹಿಕ ಸಂಪರ್ಕ ಬೆಳೆಸಲು ಅಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಆರೋಪಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

    ಪೋಕ್ಸೊ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಶಿಕ್ಷಾರ್ಹವಾದ ಪೋಕ್ಸೊ ಕಾಯ್ದೆಯ ಸೆಕ್ಷನ್ 3 ರ ವ್ಯಾಪ್ತಿಯನ್ನು ಪರಿಗಣಿಸುವಾಗ ಅರ್ಜಿದಾರರು ಮತ್ತು ಸಂತ್ರಸ್ತ ಹುಡುಗಿಯ ನಡುವೆ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯಕ್ಕೆ ಸಂತ್ರಸ್ತ ಬಾಲಕಿಯ ಒಪ್ಪಿಗೆ ಮುಖ್ಯವಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ನ್ಯಾಯಪೀಠ ಹೇಳಿದೆ.

    ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಬುಜ್ಜಿ ಅಲಿಯಾಸ್ ಬಾಬು (23) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ಸಂತ್ರಸ್ತೆಯ ಸ್ವಯಂಕೃತ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಜಾಮೀನು ಕೋರಿದ ಆರೋಪಿಯ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

    ಪೋಕ್ಸೋ ಕಾಯ್ದೆ ಪ್ರಕಾರ 18 ವರ್ಷ ಒಳಗಿನವರು ಅಪ್ರಾಪ್ತರೆಂದು ಪರಿಗಣಿಸಲ್ಪಡುತ್ತಾರೆ. ಈ ಪ್ರಕರಣದ ಸಂತ್ರಸ್ತೆ 18 ವರ್ಷ ಒಳಗಿನವರಾಗಿದ್ದಾರೆ. ಅವರು ಲೈಂಗಿಕ ಕ್ರಿಯೆಗೆ ಸಮ್ಮತಿ ನೀಡಿದ್ರೂ ಅದು ಸಮ್ಮತಿಯಾಗಿ ಪರಿಗಣಿಸುವುದಿಲ್ಲ ಎಂಬುದಾಗಿ ಪೋಕ್ಸೋ ಕಾಯ್ದೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    Post Views: 253

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.