ಬೆಂಗಳೂರು : ಚುನಾವಣೆ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ.
ಚುನಾವಣೆಯ ಘೋಷಣೆಗೂ ಮುನ್ನ ಶೋಧನೆಯ ಅಧಿಕಾರವಿಲ್ಲ, ಸಾಮಾಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಏಕಸದಸ್ಯಪೀಠ ಮಹತ್ವದ ಆದೇಶ ನೀಡಿದೆ.ಇಷ್ತಿಯಾಕ್ ಅಹಮದ್ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದ್ದು, ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಘೋಷಣೆಗೂ ಮುನ್ನ ಚುನಾವಣಾ ಅಧಿಕಾರಿಗಳು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
ಮಾ.19 ರಂದು ಚುನಾವಣಾಧಿಕಾರಿಗಳು ಶಿವಾಜಿನಗರ ಕ್ಷೇತ್ರದಲ್ಲಿ ಆಹಾರ ಸಾಮಾಗ್ರಿ ಹಂಚಿಕೆ ವೇಳೆ ದಾಳಿ ನಡೆಸಿ ಆಹಾರ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ಇಷ್ತಿಯಾಕ್ ಎಂಬುವವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 29 ರಂದು ಚುನಾವಣೆ ಘೋಷಣೆ ಹಿನ್ನೆಲೆ ಮಾ.19 ರಂದು ಆಹಾರ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾಧಿಕಾರಿಗಳ ಕ್ರಮವನ್ನು ಹೈಕೋರ್ಟ್ ರದ್ದುಗೊಳಿಸಿದೆ.