Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನ..!

    January 7, 2024
    Share

    ಬೆಳ್ತಂಗಡಿ: ಇಂಜಿನಿಯರಿಂಗ್ ವ್ಯಾಸಂಗ ಮಾಡಿದ ಪದವೀಧರನೊಬ್ಬ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇಂಜಿನಿಯರಿಂಗ್ ಮುಗಿಸಿದ ಯುವಕನೊಬ್ಬ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಜ.6 ರಂದು ಕುತ್ತಿಗೆಗೆ ಚೂರಿ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾರ್ವಜನಿಕರ ಮಾಹಿತಿಯ ಮೇರೆಗೆ ಪೊಲೀಸರು ರಕ್ಷಣೆ ಮಾಡಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಾದಾವರ ನಿವಾಸಿ ನಾರಾಯಣಪ್ಪ ಮಗ ಹಿತೇಶ್ (24) ಎಂಬ ಯುವಕ ಎನ್.ಕೆ.ಐ.ಡಿ ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಮುಗಿಸಿದ್ದಾನೆ. 2022 ರಲ್ಲಿ ಆರು ತಿಂಗಳ ಐಟಿ ಕೋರ್ಸ್ ಮಾಡಿ, ಐ.ಎನ್.ಸಿ ಯಲ್ಲಿ ಉದ್ಯೋಗಕ್ಕೆ ಸೇರಿಕೊಂಡರು ಕೂಡ ಸರಿಯಾದ ಸಂಬಳ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ ಮೂಲಕ ಜ.6 ರಂದು ಬೆಳಗ್ಗೆ ಬಂದು ಧರ್ಮಸ್ಥಳ – ಕೊಕ್ಕಡ ರಸ್ತೆಯ ಕಲ್ಲೇರಿ ಪೆಟ್ರೋಲ್ ಪಂಪ್ ಬಳಿಯ ರಸ್ತೆ ಪಕ್ಕದಲ್ಲಿ ಹೋಗಿ ಬ್ಯಾಗ್ ನಲ್ಲಿ ತಂದಿದ್ದ ಚೂರಿಯಿಂದ ಕುತ್ತಿಗೆಯನ್ನು ಇರಿದುಕೊಂಡು ರಕ್ತ ಸ್ರಾವದಿಂದ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದನ್ನು ಗಮನಿಸಿದ ಸಾರ್ವಜನಿಕರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳು ಬಂದು ಆಂಬುಲೆನ್ಸ್ ಸೇವೆ ಸಿಗದೇ ಪೊಲೀಸ್‌ ಜೀಪ್ ಮೂಲಕ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಹಿತೇಶ್ ಕುತ್ತಿಗೆ ಭಾಗಕ್ಕೆ ಚೂರಿಯಿಂದ ಇರಿದುಕೊಂಡಿದ್ದರಿಂದ ಸರಿಯಾದ ಸಮಯಕ್ಕೆ ಪೊಲೀಸರು ಆಸ್ಪತ್ರೆಗೆ ದಾಖಲು ಮಾಡಿದ ಹಿನ್ನೆಲೆ ಸದ್ಯ, ಹಿತೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

    Post Views: 196

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.