Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಚಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ- ಪ್ರಕರಣ ದಾಖಲು

    September 19, 2025
    Share

    ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಟ್ರಾಫಿಕ್ ಎಚ್‌ಸಿ ವಾಹನಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಸ್ಕೂಟರ್ ಸವಾರ ನಾಟೆಕಲ್‌ನ ಆಸಿಫ್ ಬಾವ ಎಂಬಾತ ಅದನ್ನು ಲೆಕ್ಕಿಸದೆ ಸ್ಕೂಟರ್ ಚಲಾಯಿಸಿದ್ದು, ಈ ಸಂದರ್ಭ ಎಚ್‌ಸಿ ಸ್ಕೂಟರ್ ಸವಾರನಿಗೆ ಏಯ್ ಅಂತ ಹೇಳಿ ಕೈಯಿಂದ ಸವರಿದ್ದಾರೆ. ಇದರಿಂದ ಆಕ್ರೋಶಗೊಂಡ ಆಸಿಫ್ ಬಾವ ಟ್ರಾಫಿಕ್ ಎಚ್‌ಸಿ ಜೊತೆ ವಾಗ್ವಾದ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

    ಪೊಲೀಸ್ ಜೊತೆ ವಾಗ್ವಾದ ನಡೆಸುತ್ತಿರುವುದನ್ನು ಸಾರ್ವಜನಿಕರೊಬ್ಬರು ವೀಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಈ ವೀಡಿಯೋವನ್ನು ಪರಿಶೀಲಿಸಿದ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಕೂಟರ್ ಸವಾರನು ಟ್ರಾಫಿಕ್ ಪೊಲೀಸ್‌ ರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಸ್ಪಷ್ಟವಾಗಿದೆ. ಆ ಹಿನ್ನಲೆಯಲ್ಲಿ ಸ್ಕೂಟರ್ ಸವಾರನ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ನಿಂದನೆ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ. ಅದರಂತೆ ಆರೋಪಿಯ ವಿರುದ್ಧ ನಗರ ಉತ್ತರ ಸಂಚಾರ ಠಾಣೆಯಲ್ಲಿ ಬಿಎನ್‌ಎಸ್ ಕಾಯಿದೆ 281 (ದುಡುಕುತನ ಚಾಲನೆ) 221 (ಕರ್ತವ್ಯಕ್ಕೆ ಅಡ್ಡಿ), 352 (ಅವಾಚ್ಯ ನಿಂದನೆ) ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 409

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.