Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 24 ವರ್ಷಗಳ ಹಿಂದಿನ ಪ್ರಕರಣದ ಹಳೆ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 24 ವರ್ಷಗಳ ಹಿಂದಿನ ಪ್ರಕರಣದ ಹಳೆ ಆರೋಪಿ ಅರೆಸ್ಟ್

    January 4, 2025
    Share

    ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಪ್ರವೇಶ, ಸೊತ್ತು ನಾಶ ಮತ್ತು ಜೀವ ಬೆದರಿಕೆ ಪ್ರಕರಣವೊಂದರಲ್ಲಿ ಭಾಗಿಯಾಗಿ 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮುಲ್ಕಿ ಸಮೀಪದ ಕಿಲ್ಪಾಡಿ ನಿವಾಸಿ ಕಿಶೋರ್ ಕುಮಾರ್ (34) ಎಂದು ಗುರುತಿಸಲಾಗಿದೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿನ ನಿವಾಸಿ ಸುಧಾಕರ ಭಂಡಾರಿ ಎಂಬವರು ತನ್ನ ಜಾಗದ ಮರಗಳನ್ನು ಕಿಲ್ಪಾಡಿ ಗ್ರಾಮದ ನಿವಾಸಿಗಳಾದ ಆಶೋಕ ಮತ್ತು ಕಿಶೋರ್ ಕುಮಾರ್ ರವರು ಅಕ್ರಮ ಪ್ರವೇಶ ಮಾಡಿ ಕಡಿದು ನಾಶ ಮಾಡಿ ಜೀವ ಬೆದರಿಕೆ ಹಾಕಿದ ಬಗ್ಗೆ ಮುಲ್ಕಿ ಠಾಣೆಯಲ್ಲಿ ನೀಡಿದ ದೂರಿನಂತೆ ಅ.ಕ್ರ:33/2000 ಕಲಂ:447, 427, 379, 506 ಜೊತೆಗೆ 34 ಐ.ಪಿ.ಸಿ. ಯಂತೆ ಪ್ರಕರಣ ದಾಖಲಾಗಿ ಪ್ರಕರಣವು ಮೂಡಬಿದ್ರೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು.

    ಪ್ರಕರಣದ ಆರೋಪಿಯಾದ ಕಿಶೋರ್ ಕುಮಾರ್ ಎಂಬಾತನು 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದು ಈ ಬಗ್ಗೆ ನ್ಯಾಯಾಲಯವು ಆರೋಪಿಯ ವಿರುದ್ದ ಎಲ್.ಪಿ.ಸಿ. ವಾರೆಂಟ್ ಹೊರಡಿಸಿತ್ತು. ಜನವರಿ 3 ರಂದು ಪ್ರಕರಣದ ಆರೋಪಿ ಕಿಶೋರ್ ಕುಮಾರ್ ಎಂಬಾತನ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 872

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.