Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುಜರಿ ಬಸ್ ಗಳನ್ನು ರಸ್ತೆಗಿಳಿಸದಂತೆ ಸರಕಾರಕ್ಕೆ ಹೈಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

    ಗುಜರಿ ಬಸ್ ಗಳನ್ನು ರಸ್ತೆಗಿಳಿಸದಂತೆ ಸರಕಾರಕ್ಕೆ ಹೈಕೋರ್ಟ್ ಆದೇಶ

    December 28, 2023
    Share

    ಬೆಂಗಳೂರು: ನಿಗದಿತ ಕಿಲೋ ಮೀಟರ್ ಗಳಷ್ಟು ಓಡಾಟ ನಡೆಸಿ ಸಂಚಾರ ಸಾಮರ್ಥ್ಯ ಕಳೆದುಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಅಂತಹ ಬಸ್ ಗಳನ್ನು ಯಾವುದೇ ಕಾರಣಕ್ಕೂ ಪುನಃ ನಗರ, ಹಳ್ಳಿಗಳ ಮಾರ್ಗ ಅಥವಾ ಮತ್ತಾವುದೇ ಮಾರ್ಗಗಳಲ್ಲಿನ ಸಂಚಾರಕ್ಕೆ ಬಳಸಲು ಅನುಮತಿ ನೀಡಬಾರದು ಎಂದು ರಾಜ್ಯ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

    ಗುಜರಿಗೆ ಸೇರಬೇಕಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ರಸ್ತೆಗಿಳಿಸಿದ್ದರಿಂದ 2006ರ ನವೆಂಬರ್ ನಲ್ಲಿ ಅಂಕೋಲಾದಲ್ಲಿ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.

    ಬಸ್ ಗಳು ಸಂಚಾರಕ್ಕೆ ಅರ್ಹವಾಗಿರುವ ಬಗ್ಗೆ ಪ್ರತೀ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ಸುಸ್ಥಿತಿ ದೃಢೀಕರಣ ಪತ್ರ (FC) ಪಡೆಯಬೇಕು. RTO ವತಿಯಿಂದ ದೃಢೀಕರಣ ಪತ್ರ ಪಡೆದ ಬಸ್ಗಳಿಗೆ ಮಾತ್ರವೇ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು. ಕಾಲಕಾಲಕ್ಕೆ ಬಸ್ ಗಳನ್ನು ಪರಿಶೀಲಿಸಿ ರಿಪೇರಿ ಮಾಡಬೇಕು ಎಂದೂ ನ್ಯಾಯಪೀಠ ನಿರ್ದೇಶನಗಳನ್ನು ನೀಡಿದೆ.

    ತೀರ್ಪಿನಲ್ಲಿ ವಿವರಿಸಲಾದ ನಿರ್ದೇಶನಗಳ ಕಟ್ಟುನಿಟ್ಟಾಗಿ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ಅದೇಶಿಸಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.