Facebook Twitter Instagram
    Wednesday, September 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಾರಾಷ್ಟ್ರದಲ್ಲಿ ಒಮಿಕ್ರೋನ್ BQ.1 ಪತ್ತೆ : ಮುನ್ನೆಚ್ಚರಿಕೆ ಕ್ರಮವಾಗಿ ʻಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ ʼ
    ಇತ್ತೀಚಿನ ಸುದ್ದಿ

    ಮಹಾರಾಷ್ಟ್ರದಲ್ಲಿ ಒಮಿಕ್ರೋನ್ BQ.1 ಪತ್ತೆ : ಮುನ್ನೆಚ್ಚರಿಕೆ ಕ್ರಮವಾಗಿ ʻಕರ್ನಾಟಕದಲ್ಲಿ ಹೈ ಅಲರ್ಟ್ ಘೋಷಣೆ ʼ

    October 26, 2022
    Share

    ಬೆಂಗಳೂರು : ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ನ ಒಮಿಕ್ರೋನ್ ತಳಿಯ ಹೊಸ ರೂಪಾಂತರಿ ಬಿಕ್ಯು.1 (Omicron BQ.1 ) ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೈ ಅಲರ್ಟ್(High alert in Karnataka) ಘೋಷಿಸಲಾಗಿದೆ.

    ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ. ನೆರೆಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಸಾರ್ವಜನಕಿರು ಗುಂಪು ಸೇರುವ ಸಾಧ್ಯತೆಗಳು ಅಧಿಕವಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.

    ಮಾಸ್ಕ್ ಧಾರಣೆ, ಗುಂಪು ಸೇರುವಿಕೆಯಿಂದ ದೂರ ಇರುವುದು ಹಾಗೂ ಮೂರನೇ ಡೋಸ್ ಲಸಿಕೆ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ, ಕೋವಿಡ್-19ರ ಬಿಎ.2.75 ಹಾಗೂ ಬಿಜೆ.1ನ ಓಮಿಕ್ರಾನ್ ಹೊಸ ಉಪ ರೂಪಾಂತರ ತಳಿ ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ದೀಪಾವಳಿ ಹಬ್ಬ ಹಾಗೂ ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿ ಕ್ರಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

    ಏನಿದೆ ಮಾರ್ಗಸೂಚಿಯಲ್ಲಿ..?
    • ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದೆ.
    • ಕೋವಿಡ್ ಪರೀಕ್ಷೆಗೆ ಒಳಗಾದವರು ಕಡ್ಡಾಯವಾಗಿ ಪ್ರತ್ಯೇಕವಾಗಿ ಮನೆಯಲ್ಲಿ ಸ್ವಯಂ ಪ್ರೇರಿತವಾಗಿ ಇರುವಂತೆ ಸೂಚಿಸಿದೆ.
    • ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಶೀಘ್ರವಾಗಿ ಹತ್ತಿರದ ಆಸ್ಪತ್ರೆಗೆ ತೆರಳಿ, ವೈದ್ಯಕೀಯ ಆರೈಕೆಯನ್ನು ಪಡೆಯುವಂತೆ ತಿಳಿಸಿದೆ.
    • ಏರ್ ಕಂಡೀಷನ್ ವ್ಯವಸ್ಥೆ ಇರುವ ಒಳಾಂಗಣಗಳು, ಅಗತ್ಯ ಗಾಳಿ ಬೆಳಕಿಲ್ಲದಿರುವ ಸ್ಥಳಗಳು, ಮುಚ್ಚಿದ ಸಂರಕ್ಷಣೆಯ ಜನಸಂದಣಿಯ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.
    • ಹಬ್ಬಗಳನ್ನು ಸಾಧ್ಯವಾದಷ್ಟು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವಂತೆ ತಿಳಿಸಿದೆ.
    • ಕೋವಿಡ್19 ಲಸಿಕೆಯ ಬೂಸ್ಟರ್, ಮುಂಜಾಗ್ರತಾ ಡೋಸ್ ಲಸಿಕೆ ಬಾಕಿ ಇರುವವರು ಕೂಡಲೇ ಬಡೆಯುವಂತೆ ತಿಳಿಸಿದೆ.
    • ಸಾರ್ವಜನಿಕರ ಆರೋಗ್ಯ ಹಾಗೂ ಸುರಕ್ಷತೆಯ ದೃಷ್ಠಿಯಿಂದ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸುವಂತೆ ಸೂಚಿಸಿದೆ.
    • ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸದಿರುವುದು ಹಾಗೂ ಉಗುಳುವುದಿರುವುದು, ಕೈಗಳನ್ನು ಸೋಪ್ ಹಾಗೂ ನೀರಿನಿಂದ ತೊಳೆಯವುದು.
    • ಸೋಂಕಿನ ಲಕ್ಷಣಗಳನ್ನು ಹೊಂದಿದವರ ಸಂಪರ್ಕದಿಂದ ದೂರವಿರುವಂತೆ ತಿಳಿಸಿದೆ.

    Post Views: 234

    Related Posts

    ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ

    September 23, 2026

    ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ..!! ಕಾರಿನಲ್ಲಿ 9 ತುಂಡಾಗಿ ಶವ ಪತ್ತೆ!!

    September 23, 2026

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮವಾಗಿ ಜಾನುವಾರು ಸಾಗಟ- ಲಾರಿ ಹಾಗೂ ಚಾಲಕ ವಶಕ್ಕೆ

    September 23, 2026

    ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಕೊಲೆ..!! ಕಾರಿನಲ್ಲಿ 9 ತುಂಡಾಗಿ ಶವ ಪತ್ತೆ!!

    September 23, 2026

    ಪುತ್ತೂರು ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!!

    September 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.