ಸುಳ್ಯ: ಆಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
ಮೃತರನ್ನು ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂದು ಗುರುತಿಸಲಾಗಿದೆ.ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿ ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಸಹ ಪ್ರಯಾಣಿಕ ಗಣಪತಿ ಭಟ್ ಎಂಬವರು ಗಾಯಗೊಂಡಿದ್ದು, ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.