Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇರಳ: ಆನ್‌ಲೈನ್ ಮ್ಯಾಪ್ ನಂಬಿ ಹೊಳೆಗೆ ಬಿದ್ದ ಪ್ರವಾಸಿಗರ ಕಾರು​! 
    ಇತ್ತೀಚಿನ ಸುದ್ದಿ

    ಕೇರಳ: ಆನ್‌ಲೈನ್ ಮ್ಯಾಪ್ ನಂಬಿ ಹೊಳೆಗೆ ಬಿದ್ದ ಪ್ರವಾಸಿಗರ ಕಾರು​! 

    May 26, 2024
    Share

    ಕೊಟ್ಟಾಯಂ(ಕೇರಳ): ಗೂಗಲ್ ಮ್ಯಾಪ್ ಹಾಕಿಕೊಂಡು ಪ್ರಯಾಣಿಸುತ್ತಿದ್ದ ಹೈದರಾಬಾದ್ ಮೂಲದ ಪ್ರವಾಸಿಗರಿದ್ದ ಕಾರು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಸಮೀಪ ಹೊಳೆಗೆ ಬಿದ್ದಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಓರ್ವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಕಾರಿನಲ್ಲಿ ಅಲಪ್ಪುಳ ಕಡೆಗೆ ತೆರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ರಸ್ತೆ ಮಾರ್ಗದಲ್ಲಿ ಹೊಳೆ ನೀರು ಉಕ್ಕಿ ಹರಿಯುತ್ತಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿರಲಿಲ್ಲ. ಹೀಗಾಗಿ ಮ್ಯಾಪ್ ಬಳಸಿ ಸಂಚರಿಸುತ್ತಿದ್ದರು. ಈ ವೇಳೆ, ವೇಗವಾಗಿ ಚಲಿಸುತ್ತಿದ್ದ ಕಾರು ಹೊಳೆಗೆ ಬಿದ್ದಿದೆ.

    ವಿಷಯ ತಿಳಿದ ಪೊಲೀಸರು, ಸ್ಥಳೀಯ ನಿವಾಸಿಗಳು ಕಾರಿನಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ. ಕಾರು ಸಂಪೂರ್ಣವಾಗಿ ಹೊಳೆ ನೀರಿನಲ್ಲಿ ಮುಳುಗಿದ್ದು, ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದರು.

    ಕೇರಳದಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಇಬ್ಬರು ಯುವ ವೈದ್ಯರು ಇದೇ ರೀತಿಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆನ್‌ಲೈನ್​ ಮ್ಯಾಪ್​ ಸಹಾಯದಿಂದ ಪ್ರಯಾಣಿಸುತ್ತಿದ್ದಾಗ ಇವರಿದ್ದ ಕಾರು ನದಿಗೆ ಬಿದ್ದಿತ್ತು. ಈ ಘಟನೆಯ ಬಳಿಕ, ಮಳೆಗಾಲದಲ್ಲಿ ಆನ್​ಲೈನ್​ ಮ್ಯಾಪ್​ ಬಳಸಿ ಪ್ರಯಾಣಿಸುವಾಗ ವಿಶೇಷ ಎಚ್ಚರಿಕೆ ವಹಿಸುವಂತೆ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದರು.

    Post Views: 315

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.