Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ
    ಇತ್ತೀಚಿನ ಸುದ್ದಿ

    ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ

    May 31, 2025
    Share

    ಮಂಗಳೂರು: ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು.

    ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು.

    ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ ಮತ್ತು ಅಪರಾಧ ಕೃತ್ಯಗಳಿಗೆ ಜನರನ್ನು ಪ್ರಚೋದಿಸುವ ಮಾತುಗಳ ನಡುವೆ ಸ್ಪಷ್ಟವಾದ ಅಂತರವಿದೆ. ಪ್ರಚೋದನೆ ನೀಡುವ ರೀತಿಯಲ್ಲಿ ಕಾನೂನಿಗೆ ವಿರುದ್ಧವಾಗಿ ಮಾತನಾಡಿದರೆ, ಸಿಆರ್ಪಿಸಿ, ಐಪಿಸಿ ಕಾನೂನುಗಳಿವೆ. ಕಾನೂನಿನಲ್ಲಿ ಈ ಬಗ್ಗೆ ಕ್ರಮಕ್ಕೆ ಸಾಕಷ್ಟು ಅವಕಾಶಗಳಿದ್ದು, ಇಲಾಖೆ ಸೂಕ್ತ ಕ್ರಮ ವಹಿಸಲಿದೆ ಎಂದು ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು.

    ಕೋಮುದ್ವೇಷ, ಯಾವುದೇ ಘಟನೆ ಆದಾಗ ತನಿಖೆ ನಡೆಸುತ್ತೇವೆ. ಇಲ್ಲಿನ ಜನರು ಬುದ್ಧಿವಂತರು. ಅವರಿಗೆ ಕಾನೂನಿನ ಅರಿವಿದೆ. ನಮ್ಮ ಪೊಲೀಸ್ ಇಲಾಖೆಯೂ ಅದೇ ಕಾನೂನನ್ನು ಕಲಿತು, ಅದನ್ನು ಪಾಲಿಸುತ್ತದೆ. ಪ್ರತಿ ಅಪರಾಧಕ್ಕೂ ತಕ್ಕುದಾದ ಕಾನೂನು ಇದೆ. ಆ ಕಾನೂನಿಗೆ ಅನುಸಾರವಾಗಿ ಕ್ರಮ ಆಗುತ್ತದೆ ಎಂದು ಅವರು ಹೇಳಿದರು.

    ಠಾಣೆಗಳಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ತಳ ಹಂತದ ಪೊಲೀಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯವಿರುವ ಬೇಡಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಎಲ್ಲಾ ಅಧಿಕಾರಿ ಸಿಬ್ಬಂದಿ ಉತ್ತಮವಾಗಿದ್ದಾರೆ. ಯಾರೇ ತಮ್ಮ ಕರ್ತವ್ಯದಲ್ಲಿ ವಿಫಲ ಆಗಿದ್ದಾರೆ ಎಂದರೆ ಅದರ ಜವಾಬ್ಧಾರಿಯನ್ನು ನಾನು ವಹಿಸುತ್ತೇನೆ. ನಮ್ಮ ಮಾರ್ಗದರ್ಶನವನ್ನು ಸರಿಯಾದ ದಿಸೆಯಲ್ಲಿ ಬಳಸಿಕೊಂಡು ಅವರು ಕಾರ್ಯ ನಿರ್ವಹಿಸಿದಾಗ ಯಾವುದೇ ತೊಂದರೆ ಆಗದು ಎಂದು ಹೇಳಿದರು.

    ಪೊಲೀಸ್ ಕಮಿಷನರ್ ನಡೆಸುತ್ತಿದ್ದ ಫೋನ್ ಇನ್ ಕಾರ್ಯಕ್ರಮ ಮತ್ತೆ ಪುನರಾರಂಭ ಆಗಲಿದೆಯೇ ಎಂಬ ಪ್ರಶ್ನೆಗೆ, ಯಾವುದೇ ದೂರನ್ನು ಸಾರ್ವಜನಿಕರು ನೇರವಾಗಿ ನಮಗೆ ತರಬಹುದು. ಮಾಧ್ಯಮದ ಮೂಲಕ ಬಂದ ದೂರನ್ನು ಪರಿಗಣಿಸಲಾಗುವುದು. ಯಾವುದೇ ಅಪರಾಧ ಪ್ರಕರಣಗಳು ನಡೆದಾಗಲೂ ಹಿಂದೆಯೂ ತನಿಖೆ ಆಗಿದೆ. ಮುಂದೆಯೂ ಆಗಲಿದೆ. ನಮ್ಮ ಕೆಲಸವೇ ಪೊಲೀಸಿಂಗ್ ಮಾಡುವಂತದ್ದು. ಅದನ್ನು ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದರು.

    Post Views: 225

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.