Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಿವ್-ಇನ್ ಸಂಬಂಧಕ್ಕೆ ವಿರೋಧ: ಪ್ರಿಯಕರನೊಂದಿಗೆ ಸೇರಿ ತಂದೆ-ತಾಯಿ, ತಂಗಿಯ ಹತ್ಯೆ
    ಇತ್ತೀಚಿನ ಸುದ್ದಿ

    ಲಿವ್-ಇನ್ ಸಂಬಂಧಕ್ಕೆ ವಿರೋಧ: ಪ್ರಿಯಕರನೊಂದಿಗೆ ಸೇರಿ ತಂದೆ-ತಾಯಿ, ತಂಗಿಯ ಹತ್ಯೆ

    June 23, 2026
    Share

    ಬೆಂಗಳೂರು : ಲಿವ್-ಇನ್ ರಿಲೇಷನ್‌ಶಿಪ್ ಹಾಗೂ ಪ್ರೇಮ ವಿವಾಹಕ್ಕೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಹೆತ್ತ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ತಂದೆ, ತಾಯಿ ಹಾಗೂ ಒಡಹುಟ್ಟಿದ ಕಿರಿಯ ತಂಗಿಯನ್ನು ಚಾಕುವಿನಿಂದ ಮನಸೋಇಚ್ಛೆ ಇರಿದು ಭೀಕರವಾಗಿ ಕೊಲೆ ಮಾಡಿರುವ ಮೈನಡುಗಿಸುವ ಘಟನೆ ಬೆಂಗಳೂರಿನ ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
    ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಇವರ ಕಿರಿಯ ಮಗಳು ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳು. ಕೊಲೆ ಕೃತ್ಯ ಎಸಗಿದ ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಸದ್ಯ ತಲೆಮರೆಸಿಕೊಂಡಿದ್ದಾರೆ.
    ಆರೋಪಿ ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಯನ್ನು ವಿರೋಧಿಸಿದ್ದ ತಂದೆ ಸೋಮಸುಂದರ್, ಆಕೆಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದೊಯ್ಯಲು ಪತ್ನಿ ಮುತ್ತುಲಕ್ಷ್ಮಿ ಹಾಗೂ ಕಿರಿಯ ಮಗಳು ಸುಪ್ರಿಯಾಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಬಂದಿದ್ದರು. ಈ ವೇಳೆ ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರು ಹಾಗೂ ಶ್ವೇತಾ-ಕೆನತ್ ಜೋಡಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಪ್ರೇಮಿಗಳಿಬ್ಬರು ಸೇರಿ ತಂದೆ, ತಾಯಿ ಮತ್ತು ತಂಗಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ತೀವ್ರ ಇರಿತಕ್ಕೊಳಗಾದ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾ ರಕ್ತದ ಮಡುವಿನಲ್ಲಿ ಅಪಾರ್ಟ್‌ಮೆಂಟ್ ಒಳಗಡೆಯೇ ಪ್ರಾಣ ಬಿಟ್ಟಿದ್ದಾರೆ.

    ಮನೆಯೊಳಗೆ ಪತ್ನಿ ಮತ್ತು ಕಿರಿಯ ಮಗಳು ಹೆಣವಾಗಿ ಬಿದ್ದಿದ್ದರೂ, ತೀವ್ರವಾಗಿ ಗಾಯಗೊಂಡಿದ್ದ ತಂದೆ ಸೋಮಸುಂದರ್ ಹೇಗೋ ಎದ್ದುಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಅಪಾರ್ಟ್‌ಮೆಂಟ್‌ನ ಮೆಟ್ಟಿಲುಗಳ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇವರನ್ನು ನೋಡಿ ಸ್ಥಳೀಯರು ತಕ್ಷಣವೇ ‘112’ ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹೊಯ್ಸಳ ಸಿಬ್ಬಂದಿ ತಕ್ಷಣವೇ ಸೋಮಸುಂದರ್ ಅವರನ್ನು ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ.

    ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವದಿಂದ ಸೋಮಸುಂದರ್ ಕೊನೆಯುಸಿರೆಳೆದಿದ್ದಾರೆ. ಆದರೆ, ಸಾವನ್ನಪ್ಪುವ ಮುನ್ನ ಅವರು ಪೊಲೀಸರ ಎದುರು, “ನನ್ನ ದೊಡ್ಡ ಮಗಳು ಶ್ವೇತಾ ತನ್ನ ಬಾಯ್ ಫ್ರೆಂಡ್ ಜೊತೆ ಲಿವಿಂಗ್‌ನಲ್ಲಿದ್ದಳು. ಇದು ಸರಿಯಲ್ಲ ಎಂದು ಬುದ್ಧಿ ಹೇಳಲು ಬಂದಿದ್ದೆವು. ಆದರೆ ಮಗಳು ಮತ್ತು ಆಕೆಯ ಬಾಯ್ ಫ್ರೆಂಡ್ ನಮ್ಮ ಮೇಲೆ ಚಾಕುವಿನಿಂದ ಇರಿದರು. ನನ್ನ ಹೆಂಡತಿ ಮತ್ತು ಚಿಕ್ಕ ಮಗಳು ಮನೆ ಒಳಗಡೆಯೇ ಇದ್ದಾರೆ” ಎಂದು ಕಣ್ಣೀರಿಡುತ್ತಾ ಮಗಳ ಕ್ರೂರ ಮುಖವನ್ನು ಅನಾವರಣಗೊಳಿಸಿದ್ದಾರೆ. ಸ್ಥಳಕ್ಕೆ ಕೆ.ಆರ್. ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ.

    Post Views: 145

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.