Facebook Twitter Instagram
    Sunday, November 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ
    ಇತ್ತೀಚಿನ ಸುದ್ದಿ

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026
    Share

    ಬೆಂಗಳೂರು: ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ  ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ  ತಾಲೂಕಿಗೆ ಗಡಿಪಾರು ಮಾಡಿ, ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಗೃಹ ಇಲಾಖೆಯ ಅಪೀಲು ಪ್ರಾಧಿಕಾರ ಎತ್ತಿಹಿಡಿದಿದೆ. ಈ ಮೂಲಕ ಗಡಿಪಾರು ಆದೇಶ ರದ್ದುಗೊಳಿಸುವಂತೆ ಕೋರಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಲಾಖೆಯು ತಿರಸ್ಕರಿಸಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ-1963ರ ಸೆಕ್ಷನ್ 59ರ ಅಡಿಯಲ್ಲಿ ಸಕ್ಷಮ ಪ್ರಾಧಿಕಾರವಾಗಿರುವ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

    ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ ಆದೇಶದಲ್ಲಿ ಯಾವುದೇ ನಿಯಮ ಬಾಹಿರತೆ ಅಥವಾ ಪ್ರಕ್ರಿಯಾತ್ಮಕ ಲೋಪಗಳಿಲ್ಲ ಎಂದು ಸ್ಪಷ್ಟಪಡಿಸಿರುವ ಗೃಹ ಇಲಾಖೆ, ತಿಮರೋಡಿ ಅವರ ಅರ್ಜಿಯನ್ನು ವಜಾಗೊಳಿಸಿ ಗಡಿಪಾರು ಆದೇಶವನ್ನು ಖಚಿತಪಡಿಸಿದೆ.

    ಪುತ್ತೂರು ಉಪ ವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ತಿಮರೋಡಿ ಅವರನ್ನು ಗಡಿಪಾರು ಮಾಡಿ, ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿ, ಶಾಸನಬದ್ಧ ಪ್ರಾಧಿಕಾರವಾದ ಗೃಹ ಇಲಾಖೆಯಲ್ಲೇ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿತ್ತು. ನಂತರ ಹೈಕೋರ್ಟ್ ವಿಭಾಗೀಯ ಪೀಠ ಹಾಗೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಯಿತಾದರೂ, ಎರಡೂ ಉನ್ನತ ನ್ಯಾಯಾಲಯಗಳು ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಅರ್ಜಿಗಳನ್ನು ವಜಾಗೊಳಿಸಿದ್ದವು. ಸೂಕ್ತ ಅಪೀಲು ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ಸುಪ್ರೀಂ ಕೋರ್ಟ್ ಕೂಡ ಸ್ಪಷ್ಟ ನಿರ್ದೇಶನ ನೀಡಿತ್ತು.

    ಆದೇಶದ ಪ್ರಮುಖ ಅಂಶಗಳು:
    ನ್ಯಾಯಾಲಯಗಳ ಸೂಚನೆಯಂತೆ ತಿಮರೋಡಿ ಗೃಹ ಇಲಾಖೆಗೆ ಮೇಲ್ಮನವಿ ಸಲ್ಲಿಸಿದ್ದರು. `ತಮಗೆ ಸಮರ್ಥಿಸಿಕೊಳ್ಳಲು ಸೂಕ್ತ ಕಾಲಾವಕಾಶ ನೀಡಿಲ್ಲ, ಕುಟುಂಬಕ್ಕೆ ತಾವೇ ಆಧಾರ’ ಎಂದು ತಿಮರೋಡಿ ಪರ ವಾದಿಸಲಾಗಿತ್ತು. ಆದರೆ ಡಿವೈಎಸ್ಪಿ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಗೃಹ ಇಲಾಖೆ, `ಆರೋಪಿ ವಿರುದ್ಧ ಕೊಲೆಯತ್ನ, ದೊಂಬಿ, ಹಲ್ಲೆ, ಸುಲಿಗೆ ಸೇರಿದಂತೆ ಹಲವಾರು ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ.

    ಗಡಿಪಾರು ಪ್ರಕ್ರಿಯೆಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೂ ಹಾಗೂ ಆದೇಶದ ಬಳಿಕವೂ ಅವರ ವಿರುದ್ಧ ಹೊಸ ಪ್ರಕರಣಗಳು ದಾಖಲಾಗಿವೆ. ಗಡಿಪಾರು ಕ್ರಮವು ಶಿಕ್ಷೆಯಲ್ಲ, ಬದಲಿಗೆ ಸಾರ್ವಜನಿಕ ಶಾಂತಿ ಕಾಪಾಡಲು ಕೈಗೊಳ್ಳಲಾದ ಮುನ್ನೆಚ್ಚರಿಕಾ ಕ್ರಮ. ವಿಚಾರಣೆಗೆ ಅವರಿಗೆ ಸೂಕ್ತ ಅವಕಾಶ ನೀಡಲಾಗಿದೆ ಎಂದು ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ

    Post Views: 2

    Related Posts

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026

    ಗರ್ಭಪಾತಾನಂತರದ ತಾಯಿ ಮರಣವನ್ನು ಶೂನ್ಯಕ್ಕೆ ತಂದ ಮಂಗಳೂರಿನ ಸರಕಾರಿ ಲೇಡಿಗೋಷನ್ ರಾಜ್ಯ ಮಟ್ಟದ ಅತ್ಯುತ್ತಮ ಜಿಲ್ಲಾ ಆಸ್ಪತ್ರೆ ಪ್ರಶಸ್ತಿಗೆ ಆಯ್ಕೆ

    October 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.