Facebook Twitter Instagram
    Sunday, November 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಾಕಿ ಟ್ರಾಫಿಕ್ ದಂಡಕ್ಕೆ ಶೇ.50 ರಿಯಾಯಿತಿ- ನ.21 ರಿಂದ ಡಿ. 11 ರವರೆಗೆ ಅವಕಾಶ
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಕಿ ಟ್ರಾಫಿಕ್ ದಂಡಕ್ಕೆ ಶೇ.50 ರಿಯಾಯಿತಿ- ನ.21 ರಿಂದ ಡಿ. 11 ರವರೆಗೆ ಅವಕಾಶ

    November 22, 2026
    Share

    ಮಂಗಳೂರು : ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ರಾಜ್ಯ ಸರಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದ್ದು, ಟ್ರಾಫಿಕ್ ನಿಯಮ
    ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿದೆ.

    ಡಿ.12ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ, ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ ಮೂಲಕ ಬಾಕಿ ಇರುವ ಪ್ರಕರಣಗಳ ದಂಡಕ್ಕೆ ನ.21ರಿಂದ ಡಿಸೆಂಬರ್ 11ರವರೆಗೆ ಶೇ.50ರಷ್ಟು ರಿಯಾಯಿತಿ ಕಲ್ಪಿಸಲಾಗಿದೆ.

    ರಾಜ್ಯ ಸರಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991ರಿಂದ 2025ರವರೆಗಿನ ಅವಧಿಯಲ್ಲಿ ದಾಖಲಾಗಿರುವ ಹಾಗೂ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.

    ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿ ದಂತೆ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಪಾವತಿಸಲು ಕಾಯುತ್ತಿರುವ ವಾಹನ ಮಾಲಕರು ಹಾಗೂ ಚಾಲಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆದ್ದರಿಂದ ಸಾರ್ವಜನಿಕರು ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆದುಕೊಂಡು, ತಮ್ಮ ವಾಹನಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಹ ಇ-ಚಲನ್ ಪ್ರಕರಣಗಳ ದಂಡವನ್ನು ಶೇ.50ರಷ್ಟು ರಿಯಾಯಿತಿಯಲ್ಲಿ ಪಾವತಿಸುವ ಮೂಲಕ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 4

    Related Posts

    ಮಂಗಳೂರು:ಮಹಿಳೆಯ ಮೇಲೆ ಹಲ್ಲೆ, ಅತ್ಯಾಚಾರ ಪ್ರಕರಣ- ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 54 ಸಾವಿರ ರೂ. ದಂಡ

    November 22, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026

    ಮಂಗಳೂರು: ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ ವ್ಯಕ್ತಿಗೆ ಜೈಲು!!

    November 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಬಾಕಿ ಟ್ರಾಫಿಕ್ ದಂಡಕ್ಕೆ ಶೇ.50 ರಿಯಾಯಿತಿ- ನ.21 ರಿಂದ ಡಿ. 11 ರವರೆಗೆ ಅವಕಾಶ

    November 22, 2026

    ಮಂಗಳೂರು:ಮಹಿಳೆಯ ಮೇಲೆ ಹಲ್ಲೆ, ಅತ್ಯಾಚಾರ ಪ್ರಕರಣ- ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 54 ಸಾವಿರ ರೂ. ದಂಡ

    November 22, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವ ಸಹಿತ 6 ಜನರ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    November 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.