Facebook Twitter Instagram
    Saturday, October 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ದುರ್ಮರಣ
    ಇತ್ತೀಚಿನ ಸುದ್ದಿ

    ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ದುರ್ಮರಣ

    October 3, 2026
    Share

    ಕಾಸರಗೋಡು: ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿಯೊಂದು ರಸ್ತೆ ಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಹೊರ ರಾಜ್ಯಗಳ ಕಾರ್ಮಿಕರು ಸಾವನ್ನಪ್ಪಿದ ಘಟನೆ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಬಳಿ ಶನಿವಾರ(ಅ.03) ಮುಂಜಾನೆ ನಡೆದಿದೆ.

    ಮಧ್ಯಪ್ರದೇಶ ಮೂಲದ ದೇವೇಂದ್ರನ್ ಮತ್ತು ಛತ್ತೀಸ್‌ಗಢ ಮೂಲದ ಮನಾಸಿರ್ ಮೃತಪಟ್ಟವರು. ಇಬ್ಬರೂ ಬೋರ್‌ವೆಲ್‌ ಲಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎನ್ನಲಾಗಿದೆ.

    ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಬೋರ್‌ವೆಲ್ ಲಾರಿ, ವರಕ್ಕಾಡ್ ಜಂಕ್ಷನ್ ಬಳಿಯ ಕಡಿದಾದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ನಿಯಂತ್ರಣ ಕಳೆದುಕೊಂಡು, ರಸ್ತೆ ಪಕ್ಕದಲ್ಲೇ ಇದ್ದ ಜೇಸನ್ ಎಂಬವರ ಮನೆಯ ಮೇಲೆ ಲಾರಿ ಉರುಳಿ ಬಿದ್ದಿದೆ.

    ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಕಾರ್ಮಿಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

    ಅಪಘಾತದ ವೇಳೆ ಮನೆಯ ಮೇಲಾವಣಿಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಆದರೆ, ಅದೃಷ್ಟವಶಾತ್ ಮನೆಯಲ್ಲಿದ್ದ ಜೇಸನ್ ಮತ್ತು ಅವರ ಕುಟುಂಬದ ಸದಸ್ಯರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಯ ಭಾರೀ ಗಾತ್ರದ ಕ್ರೇನ್ ಭಾಗವು ಟೆರೇಸ್‌ನ ಬದಿಗೆ ಸಿಲುಕಿದ್ದರಿಂದ ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.

    ಸ್ಥಳಕ್ಕೆ ಧಾವಿಸಿದ ಪೋಲಿಸರು ಮತ್ತು ರಕ್ಷಣಾ ಸಿಬ್ಬಂದಿ ಲಾರಿಯನ್ನು ತೆರವುಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 10

    Related Posts

    ಮಂಗಳೂರು: ಎರಡು ಮನೆ ಕನ್ನ ಕಳವು ಪ್ರಕರಣದ ಆರೋಪಿಗಳು ಅರೆಸ್ಟ್!!

    October 3, 2026

    ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ!! ಪ್ರಕರಣ ದಾಖಲು..!

    October 3, 2026

    ಕಾರು ಕೊಡಿಸುವುದಾಗಿ ಹೇಳಿ 5 ಲಕ್ಷ ವಂಚನೆ!!

    October 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಎರಡು ಮನೆ ಕನ್ನ ಕಳವು ಪ್ರಕರಣದ ಆರೋಪಿಗಳು ಅರೆಸ್ಟ್!!

    October 3, 2026

    ಕಾಸರಗೋಡು: ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿಬಿದ್ದ ಬೋರ್‌ವೆಲ್ ಲಾರಿ – ಇಬ್ಬರು ಕಾರ್ಮಿಕರು ದುರ್ಮರಣ

    October 3, 2026

    ಕಾಪು: 5 ವರ್ಷದ ಮಗಳೊಂದಿಗೆ ತಂದೆ ನಾಪತ್ತೆ!! ಪ್ರಕರಣ ದಾಖಲು..!

    October 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.