Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿದ ಯುವತಿ -ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಆಕ್ರೋಶ
    ಇತ್ತೀಚಿನ ಸುದ್ದಿ

    ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿದ ಯುವತಿ -ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಆಕ್ರೋಶ

    October 27, 2022
    Share

    ಮಂಗಳೂರು: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ  ಸಿನಿ ಜಗತ್ತಿನಲ್ಲಿ ಹವಾ ಸೃಷ್ಟಿಸಿದ್ದು ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸೋಷಿಯಲ್‌ ಮೀಡಿಯಾಗಳಲ್ಲಿ ಕಾಂತಾರ ಕುರಿತ ಪೋಸ್ಟ್‌, ರೀಲ್ಸ್‌ ಹಾಗೂ ವಿಡಿಯೋಗಳು ಸಾಕಷ್ಟು ಸದ್ದು ಮಾಡುತ್ತಿವೆ. ಆದರೆ ಯುವತಿಯೋರ್ವಳು ಇನ್ಸ್ಟಾಗ್ರಾಮ್‌ನಲ್ಲಿ ಮಾಡಿರುವ ರೀಲ್ಸ್‌ ಈಗ ವಿವಾದಕ್ಕೆ ಕಾರಣವಾಗಿದೆ. ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾಳೆ.

    ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿ ಯುವತಿ ರೀಲ್ಸ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ಯುವತಿ ವಿರುದ್ದ ಆಕ್ರೋಶ ಕೇಳಿಬಂದಿದೆ. ಮೇಕಪ್ ಅರ್ಟಿಸ್ಟ್ ಆಗಿರೋ ಶ್ವೇತಾ ರೆಡ್ಡಿಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿ ಅಪ್‌ಲೋಡ್‌ ಮಾಡಿದ್ದಾರೆ. ಸಿನಿಮಾದ ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ದೈವಾರಾಧನೆ ಅಣಕ ಮಾಡಿರುವ ಯುವತಿ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ. ದೈವಾರಾಧನೆಯು ತುಳುನಾಡಿನ ಧಾರ್ಮಿಕ ನಂಬಿಕೆಯ ಭಾಗವಗಿದೆ. ಹೀಗಾಗಿ ತುಳುನಾಡಿನ ನಂಬಿಕೆಗೆ ಇದರಿಂದ ಧಕ್ಕೆಯಾಗಿದೆ, ರೀಲ್ಸ್‌ನ್ನು ತಕ್ಷಣ ಡಿಲೀಟ್‌ ಮಾಡಿ ಕ್ಷಮೆ ಕೇಳುವಂತೆ ಹಲವರು ಕಾಮೆಂಟ್‌ ಮಾಡಿದ್ದಾರೆ. ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಯುವತಿ ರೀಲ್ಸ್‌ ಡಿಲೀಟ್‌ ಮಾಡಿದ್ದಾಳೆ.

    “ತುಳುನಾಡಿನ ದೈವ ದೇವರುಗಳು ಎಂದರೆ ನಿಮಗೆ ಮನರಂಜನೆ ವಸ್ತು ಅನ್ಕೋಂಡ್ರ ಅವಿವೇಕಿಗಳೆ, ನಿಮ್ಮ ಲೈಕ್ ಕಮೆಂಟ್ ಫಾಲೋವರ್ಸ್ ಗಾಗಿ ನಮ್ಮ ನಂಬಿಕೆಗಳ ಜೊತೆಗೆ ಆಟವಾಡಬೇಡಿ ಮರ್ಯಾದೆಯಲ್ಲಿ ಪೋಸ್ಟ್ ಡಿಲೀಟ್ ಮಾಡಿ. ನಿಮ್ಮ ತೀಟೆಗೆ ನಮ್ಮ ನಂಬಿಕೆ ಬಳಸಿಕೊಳ್ಳಬೇಡಿ” ಎಂದು ಬಳಕೆದಾರರೊಬ್ಬರು ಕಾಮೆಂಟ್‌ ಮಾಡಿದ್ದಾರೆ.

    ಇನ್ನು ಫಾಲೋವರ್ಸ್‌ ಲೈಕ್ ಗೋಸ್ಕರ ನಮ್ಮ ದೈವ ದೇವರನ್ನು ಅವಮಾನ ಮಾಡಿದರೇ ಕಂಡಿತವಾಗಿಯು ನಾವು ಸುಮ್ಮನೆ ಇರಲ್ಲ, ಮರ್ಯಾದಿಯಿಂದ ಪೊಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದರೆ ಸರಿ…! ಇಲ್ಲದಿದ್ದರೆ ಮುಂದೆ ಆಗುವ ಎಲ್ಲ ಪರಿಣಾಮಕೇ ನೀವೇ ಹೊಣೆ” ಎಂದು ಮತ್ತೊಬ್ಬರು ಪೋಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶದ ಬಳಿಕ ಯುವತಿ ಇನ್‌ಸ್ಟಾಗ್ರಾಮ್‌ ಖಾತೆಯಿಂದ ರೀಲ್ಸ್‌ಗಳನ್ನು ಡಿಲೀಟ್‌ ಮಾಡಿದ್ದಾಳೆ.

    Post Views: 163

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.