Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂಚಾಯತ್ ಪಿಡಿಓ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ 
    ಇತ್ತೀಚಿನ ಸುದ್ದಿ

    ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂಚಾಯತ್ ಪಿಡಿಓ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ 

    January 23, 2025
    Share

    ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

    ದೂರದಾರರು 9/11 ದಾಖಲೆ ಮಾಡಿಕೊಡಲು ಗಂಗೊಳ್ಳಿ ಗ್ರಾಮಪಂಚಾಯತ್ ಗೆ ತೆರಳಿದ್ದರು, ಈ ವೇಳೆ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರು 27 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, ಆದರೆ ಹಣ ನೀಡಲು ಹಿಂದೇಟು ಹಾಕಿದ ದೂರುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಗೆ ದೂರು ನೀಡಿರುತ್ತಾರೆ.

    ನಿನ್ನೆ ಬೆಳಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಕಚೇರಿಯಲ್ಲಿ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ಸದರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ. ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ ಮಾರ್ಗದರ್ಶನದಲ್ಲಿ, ಉಡುಪಿಯ ಲೋಕಾಯುಕ್ತ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್ ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.