Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಬಸ್ ಡಿಕ್ಕಿ-ರಸ್ತೆ ಪೂರ್ತಿ ಹರಿದ ಮೊಟ್ಟೆ ಲೋಳೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಬಸ್ ಡಿಕ್ಕಿ-ರಸ್ತೆ ಪೂರ್ತಿ ಹರಿದ ಮೊಟ್ಟೆ ಲೋಳೆ..!

    October 28, 2022
    Share

    ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಸೊಂದು ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಗರದ ವೆಲೆನ್ಸಿಯಾದಲ್ಲಿ ನಡೆದಿದೆ.

    ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಸುಮಾರು 15 ಅಡಿಗಳಷ್ಟು ದೂರ ತಳ್ಳಲ್ಪಟ್ಟಿದ್ದು, ಮೊಟ್ಟೆಗಳೆಲ್ಲ ಒಡೆದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

    ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಒಟ್ಟೊಟ್ಟಿಗೆ ಬಂದಿದ್ದು, ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಸಿಟಿ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ ಅಂಗಡಿಗೆ ಮೊಟ್ಟೆ ಪೂರೈಕೆ ಮಾಡುತ್ತಿದ್ದ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಆ ವಾಹನದಲ್ಲಿದ್ದ ಮೊಟ್ಟೆಗಳಲ್ಲೇ ಒಡೆದು ಹೋಗಿದ್ದು, ರಸ್ತೆಯಲ್ಲಿ ಮೊಟ್ಟೆಯ ರಸ ನೀರಿನಂತೆ ಹರಿದಿದೆ.

    ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಮೊಟ್ಟೆ ಸಾಗಾಟದ ವಾಹನ ಎದುರಿದ್ದ ಗೂಡ್ಸ್ ಟೆಂಪೊ ಹಾಗೂ ಬೈಕೊಂದಕ್ಕೂ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ.

    ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಅಪಘಾತಕ್ಕೆ ಕಾರಣವಾದ ಬಸ್ಸನ್ನು ವಶಪಡಿಸಿಕೊಂಡಿದ್ದಾರೆ.

    Post Views: 177

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.