ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದರು.
ಮೇ.13ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ಗಳ ಮತ ಎಣಿಕೆ ಶಾಂತಿ ಯುತವಾಗಿ ನಡೆದಿದೆ. 6ಕ್ಷೇತ್ರ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು, 2 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು. ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ವಿವಿಧ ಪಕ್ಷಗಳ ಅಭ್ಯರ್ಥಿಗಳು,ಏಜೆಂಟರು, ಶಾಂತಿ ಸುವ್ಯವಸ್ಥೆಗೆ ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯ ದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ ಹೊರ ಜಿಲ್ಲೆಯ ಅಧಿಕಾರಿಗಳಿಗೆ,ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ ಜಿಲ್ಲೆಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.