Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ – ಹೈಕೋರ್ಟ್
    ಇತ್ತೀಚಿನ ಸುದ್ದಿ

    ಟ್ರಾಫಿಕ್ ಪೊಲೀಸರು ವಾಹನ ಸವಾರರಿಂದ ದಂಡ ಸಂಗ್ರಹಿಸುವಂತಿಲ್ಲ – ಹೈಕೋರ್ಟ್

    December 18, 2023
    Share

    ಬೆಂಗಳೂರು : ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಸಂಚಾರಿ ಪೊಲೀಸರು ಯಾವುದೇ ಸಂದರ್ಭದಲ್ಲಿ ವಾಹನ ಸವಾರರಿಂದ ದಂಡದ ಮೊತ್ತ ಸಂಗ್ರಹಿಸುವ ಅವಕಾಶವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

    ಹೆಲ್ಲೆಟ್ ಧರಿಸದೇ ಇರುವುದಕ್ಕೆ ದಂಡಪಾವತಿಸಲು ನಿರಾಕರಿಸಿದ ಮತ್ತು ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದ ಆರೋಪಸಂಬಂಧ ತಮ್ಮ ವಿರುದ್ಧದ ದೋಷಾರೋಪ ಪಟ್ಟಿ ರದ್ದು ಮಾಡುವಂತೆ ಕೋರಿ ಕೆ.ಆರ್.ಪೇಟೆ ಪಟ್ಟಣದ ಸುಭಾಷ್‌ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್ ಚೆಂದನ್ ಗೌಡರ್ ಅವರ ಪೀಠ ಈ ಆದೇಶ ಮಾಡಿದೆ.

    ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಯಾವುದೇ ಸಂದರ್ಭದಲ್ಲಿ ಆರೋಪಿಯಿಂದ ದಂಡದ ಮೊತ್ತ ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ.

    ಹೈಕೋರ್ಟ್ ನೀಡಿದ್ದ ತೀರ್ಪು ಉಲ್ಲೇಖಿಸಿದ ನ್ಯಾಯಪೀಠ, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿ ಹೊರಡಿಸಿರುವ ಸುತ್ತೋಲೆ ಪ್ರಕಾರ, ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾ ರವಿದೆ. ಯಾವುದೇ ಪರಿಸ್ಥಿತಿಯಲ್ಲೂ ಸಂಚಾರ ಪೊಲೀಸರು ಆರೋಪಿಯಿಂದ ದಂಡ ಸಂಗ್ರಹಿ ಸಲು ಸಾಧ್ಯವಿಲ್ಲ. ವಾಹನ ತಪಾಸಣಾ ಚಟುವ ಟಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡ ಬೇಕು. ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಮುಂದಾದರೆ ವ್ಯಕ್ತಿಯನ್ನು ತಡೆಯಬೇಕು. ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಠಾಣೆಯ ಪೊಲೀಸರನ್ನು ಕರೆಸಿ, ಆರೋಪಿಯನ್ನು ವಶಕ್ಕೆ ನೀಡಬೇಕು. ಇಲ್ಲದಿದ್ದರೆ ಹಲ್ಲೆ ಹಾಗೂ ಬಲಪ್ರಯೋಗ ನಡೆಸಿ ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಪ್ರಕರಣ ವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

    Post Views: 605

    Related Posts

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಗನ ವಂಚನೆಗೆ ಪೋಷಕರ ಮೇಲೆ ಕೇಸ್ ಹಾಕುವುದು ತಪ್ಪು : ಕರ್ನಾಟಕ ಹೈಕೋರ್ಟ್ 

    July 28, 2026

    ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್, ಪೊಲೀಸರ ವಶಕ್ಕೆ!!

    July 28, 2026

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.