Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿಲಿಕುಳದಲ್ಲಿ ಜನಿಸಿದ ಹುಲಿಮರಿಗಳ ದತ್ತು ಸ್ವೀಕಾರ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಮಂಗಳೂರು: ಪಿಲಿಕುಳದಲ್ಲಿ ಜನಿಸಿದ ಹುಲಿಮರಿಗಳ ದತ್ತು ಸ್ವೀಕಾರ ಕಾರ್ಯಕ್ರಮ

    December 22, 2025
    Share

    ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು ಯೋಜನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ ಅವರು,  ಶೃಂಗೇರಿ ಮತ್ತು ಹರಿಹರಪುರದಲ್ಲಿ ಕಳೆದ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು. ಆ ಸಮಯದಲ್ಲಿ ಹಳೆಯ ನಂಬಿಕೆಗಳು ಹೆಚ್ಚಾಗಿ ಪ್ರಾಬಲ್ಯ ಹೊಂದಿದ್ದವು ಎಂದು ಅವರು ನೆನಪಿಸಿಕೊಂಡರು. ಹುಲಿಗಳು ಹಿಂದಿನಿOದಲೇ ದಾಳಿ ಮಾಡುತ್ತವೆ ಎಂಬ ನಂಬಿಕೆ ಇದ್ದುದಾಗಿ ಹೇಳಿದರು.

    ವಿದ್ಯುತ್ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕೊರತೆಯಿದ್ದ ಅಲ್ಪವಿಕಸಿತ ಗ್ರಾಮಗಳಲ್ಲಿ ಆಗ ಹುಲಿ ದಾಳಿಗಳು ಹೆಚ್ಚಾಗುತ್ತಿದ್ದವು. ಈ ದಿನಗಳಲ್ಲಿ ಕಾಡಿನಲ್ಲಿ ಹುಲಿಯನ್ನು ನೋಡುವುದಕ್ಕೂ ಸಹ ಭಾಗ್ಯ ಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಡಿಜಿಟಲೀಕರಣದ ಯುಗದಲ್ಲಿ ‘ಹುಲಿಯನ್ನು ಉಳಿಸಿ’ ಉಪಕ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ವೇಗ ಸಿಗಲಿದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು. ಜೊತೆಗೆ ಉದ್ಯಾನವನದ ಮುಂದಿನ ಹುಲಿಯನ್ನು ದತ್ತು ಪಡೆಯುವಲ್ಲಿ ತಾವೇ ಮೊದಲಿಗರಾಗುವುದಾಗಿ ತಿಳಿಸಿದರು.

    ಒಂದು ವರ್ಷದ ವಯಸ್ಸು ತುಂಬಿದ ಒಲಿವರ್ ಮತ್ತು ಟೆನ್ನಿಸನ್ ಎಂಬ ಹುಲಿ ಮರಿಗಳು ಚೆನ್ನಾಗಿ ಬೆಳೆಯಲಿ ಹಾಗೂ ಪಿಲಿಕುಳ ಜೈವಿಕ ಉದ್ಯಾನವನದ ಬ್ರ‍್ಯಾಂಡ್ ರಾಯಭಾರಿಗಳಾಗಿ ರೂಪುಗೊಳ್ಳಲಿ ಎಂದು ಅವರು ಹಾರೈಸಿದರು. ಎರಡು ಹುಲಿ ಮರಿಗಳನ್ನು ದತ್ತು ಪಡೆದುದುಕೊಂಡಿರುವ ಕಾರ್ಡೊಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್‌ನ ಪ್ರಧಾನ ವ್ಯವಸ್ಥಾಪಕರಾದ ದಿವಾಕರ್ ಕದ್ರಿ ಅವರು ಮಾತನಾಡಿ, ಹುಲಿ ಸಂರಕ್ಷಣೆಯ ವಿಷಯದಲ್ಲಿ ಕೇವಲ ಭಾವನಾತ್ಮಕವಾಗಿ ಪ್ರತಿಕ್ರಿಯಿಸುವುದಕ್ಕಿಂತ ಪ್ರಾಯೋಗಿಕ ಕ್ರಮಗಳನ್ನು ಕೈಗೊಳ್ಳುವ ಸಮಯ ಬಂದಿದೆ ಎಂದು ಹೇಳಿದರು.ಒಂದು ಹುಲಿ ಬದುಕಿ ಉಳಿಯಲು ಕನಿಷ್ಠ 30 ಚದರ ಕಿಲೋಮೀಟರ್‌ಗಳಷ್ಟು ಮುಕ್ತ ಪ್ರದೇಶ ಹಾಗೂ ಕಟ್ಟುನಿಟ್ಟಾದ ನಿಯಮಗಳ ಪ್ರಕಾರ ಕನಿಷ್ಠ 52 ಬೇಟೆ ಪ್ರಾಣಿಗಳ ಸಹವಾಸ ಅಗತ್ಯವಿದೆ ಎಂದು ಅವರು ತಿಳಿಸಿದರು. ಹುಲಿ ಸಂರಕ್ಷಣಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿಸಲು ಅದನ್ನು ಸಂಪೂರ್ಣ ಏಷ್ಯಾ ಮಟ್ಟಕ್ಕೆ ವಿಸ್ತರಿಸುವುದು ಅತ್ಯಾವಶ್ಯಕ ಎಂದು ಅವರು ಅಭಿಪ್ರಾಯಪಟ್ಟರು. ಅರಣ್ಯ ನಾಶ ಮುಂದುವರಿದಲ್ಲಿ ಒಂದು ವರ್ಷದೊಳಗೆ ಹುಲಿ ಜಾತಿಯ ಉಳಿವಿಗೆ ಭಾರೀ ಅಪಾಯ ಎದುರಾಗಲಿದೆ ಎಂದು ಅವರು ಎಚ್ಚರಿಸಿದರು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ ದರ್ಬಾರಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ ಅರುಣ್ ಕುಮಾರ್, ಪಿಲಿಕುಳ ಜೈವಿಕ ಉದ್ಯಾನವನ ನಿರ್ದೇಶಕ ಪ್ರಶಾಂತ್ ಪೈ, ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಂಜುನಾಥ್,ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಉಪ ಸಮಿತಿ ಅಧ್ಯಕ್ಷ ಶ್ರೀನಿಕೇತನ, ಅಧಿಕಾರಿಗಳಾದ ಕೆ ವಿ ರಾವ್, ಡಾ. ಅಶೋಕ್, ಡಾ. ದಿವ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

    Post Views: 228

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.