Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
    ಇತ್ತೀಚಿನ ಸುದ್ದಿ

    ಸುಳ್ಯ : ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

    December 31, 2022
    Share

    ಸುಳ್ಯ : ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮಂಗಳೂರು, ಪುತ್ತೂರು, ಸುಳ್ಯ ಅಗ್ನಿಶಾಮಕದಳ ಮತ್ತು ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ.

    ಸುಳ್ಯ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಅಗ್ನಿಶಾಮಕ ದಳದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೆ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆ ತಡೆಯುವ ಕಾರ್ಯಾಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲನ್ನು ಸುಬ್ರಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30 ರ ಸುಮಾರಿಗೆ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊ ಪೈಲಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ. ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರೈಲ್ವೆ ನಿಲ್ದಾಣದಿಂದ ಪುತ್ತೂರು ಅಗ್ನಿಶಾಮಕ ದಳಕ್ಕೆ ಕರೆ ಮಾಹಿತಿ ನೀಡಲಾಯಿತು. ಮಂಗಳೂರು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಅವರ ನೇತೃತ್ವದಲ್ಲಿ ಪುತ್ತೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಪಿ.ಆನಂದ್, ಮುಖ್ಯ ಅಗ್ನಿಶಾಮಕ ರುಕ್ಮಯ್ಯ ಗೌಡ, ಚಾಲಕ ಯಾದವ್, ಸಿಬ್ಬಂದಿ ಮಂಜುನಾಥ್, ಗೃಹ ರಕ್ಷಕ ದಳದ ಮಂಜುನಾಥ್ ಸೇರಿ ಸುಳ್ಯ, ಬೆಳ್ತಂಗಡಿಯ ಅಗ್ನಿಶಾಮಕ ದಳದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.