Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿ.12ಕ್ಕೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ
    ಇತ್ತೀಚಿನ ಸುದ್ದಿ

    ಡಿ.12ಕ್ಕೆ ಬಹುನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

    December 10, 2025
    Share

    ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ ನಿರ್ದೇಶನದ, ವಿಭಿನ್ನ ತಂತ್ರಜ್ಞಾನದ ಬಹುತಾರಾಗಣದ “ಪಿಲಿಪಂಜ” ತುಳು ಸಿನಿಮಾ ಡಿಸೆಂಬರ್ 12 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಸಿನಿಮಾದ ಕಾರ್ಯಕಾರಿ ನಿರ್ಮಾಪಕ, ನಟ ರಮೇಶ್ ರೈ ಕುಕ್ಕುವಳ್ಳಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

    ಬಳಿಕ ಮಾತನಾಡಿದ ನಿರ್ದೇಶಕ ಭರತ್ ಶೆಟ್ಟಿ, “ಈಗಾಗಲೇ ಸಿನಿಮಾದ ಮೂರು ಪ್ರೀಮಿಯರ್ ಶೋಗಳು ನಡೆದಿದ್ದು, ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2 ಗಂಟೆ 5 ನಿಮಿಷಗಳ ಅವಧಿಯಲ್ಲಿ ಸಿನಿಮಾ ಇರಲಿದ್ದು ಪ್ರೇಕ್ಷಕರಿಗೆ ಯಾವುದೇ ರೀತಿಯಲ್ಲಿ ಬೋರ್ ಆಗದಂತೆ ಸಿನಿಮಾ ಮೂಡಿಬಂದಿದೆ. ಸಿನಿಮಾಕ್ಕೆ ರಾತ್ರಿಯ ಸನ್ನಿವೇಶ ಅಗತ್ಯವಿದ್ದ ಕಾರಣ ಹೆಚ್ಚಿನ ಶೂಟಿಂಗ್ ರಾತ್ರಿಯ ವೇಳೆ ಮಾಡಲಾಗಿದೆ. ಕಲಾವಿದರು ನಿರ್ಮಾಪಕರು ಸಿನಿಮಾಕ್ಕೆ ಸಾಕಷ್ಟು ಶ್ರಮವಹಿಸಿ ದುಡಿದಿದ್ದಾರೆ. ಎಲ್ಲರೂ ಡಿ.12ರಂದು ಥಿಯೇಟರ್ ನಲ್ಲಿ ಸಿನಿಮಾ ನೋಡಿ” ಎಂದರು. ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಬೆಳ್ತಂಗಡಿಯಲ್ಲಿ ಭಾರತ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಮುಡಿಪುವಿನಲ್ಲಿ ಭಾರತ್ ಸಿನಿಮಾಸ್ ನಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರವಿ ರಾಮಕುಂಜ, ರೂಪಶ್ರೀ ವರ್ಕಾಡಿ, ರಂಜನ್ ಬೋಳೂರು, ರಾಜ್ ಪ್ರಕಾಶ್ ಶೆಟ್ಟಿ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ಜಯಶೀಲ, ಭಾಸ್ಕ‌ರ್ ಮಣಿಪಾಲ ಮುಂತಾದವರು ಅಭಿನಯಿಸಿದ್ದಾರೆ. ಇದನ್ನೂ ಓದಿ: ತೆರೆಗೆ ಬರಲು ಸಿದ್ಧವಾಯ್ತು ‘ಪಿಲಿಪಂಜ’; ಇಂದು ನಡೆಯಲಿದೆ ಪ್ರಥಮ ಪ್ರೀಮಿಯರ್ ಶೋ! ಸಹನಿರ್ಮಾಪಕಿ ಬಿಂದಿಯ ಪ್ರತೀಕ್, ಛಾಯಾಗ್ರಹಣ ಉದಯ್ ಬಳ್ಳಾಲ್, ಸಂಕಲನ ಶ್ರೀನಾಥ್ ಪವಾರ್, ಸಂಗೀತ ಎಲ್ ವಿ ಯಸ್, ಡಿ ಐ ಪ್ರಜ್ವಲ್ ಸುವರ್ಣ, ಸಿಜಿವರ್ಕ್ ಕಿರಣ್ ಬೆಂಗಳೂರು, ಸಹನಿರ್ದೇಶನ ಅಕ್ಷತ್ ವಿಟ್ಲ, ಚಿತ್ರಕಥೆ ಸಂಭಾಷಣೆ ಸುರೇಶ್ ಬಲ್ಮಠ, ಸಹಾಯಕ ನಿರ್ದೇಶನ ಸಜೇಶ್ ಪೂಜಾರಿ, ಪ್ರೊಡಕ್ಷಣ್ ಮ್ಯಾನೆಜರ್ ಕಾರ್ತಿಕ್ ಜೆ. ಶೆಟ್ಟಿ, ಸಾಹಿತ್ಯ ಕೆ ಕೆ ಪೇಜಾವರ, ರಜಿತ್ ಕದ್ರಿ, ರಕ್ಷಣ್ ಮಾಡೂರು, ಹಿನ್ನೆಲೆ ಗಾಯನ ನಿಹಾಲ್ ತಾವ್ರೋ, ಕೃತಿಕಾ ಅಖಿಲ್, ಸಂದೇಶ್ ನೀರ್ ಮಾರ್ಗ, ರಕ್ಷಣ್ ಮಾಡೂರು ನೀಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ನಿರ್ಮಾಪಕ ಪ್ರತೀಕ್ ಯು.ಪೂಜಾರಿ ಕಾವೂರು, ಕೆಮರಾಮ್ಯಾನ್ ಉದಯ ಬಳ್ಳಾಲ್, ನಟಿ ದಿಶಾ ರಾಣಿ, ಸಂಗೀತ ನಿರ್ದೇಶಕ ಎಲ್ವಿಯಸ್ ಉಪಸ್ಥಿತರಿದ್ದರು.

    Post Views: 225

    Related Posts

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.